ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆ, ಯುವ ಜನತೆ ಈ ಹೇರಿಕೆಗಳಿಗೆ ಬೆದರೋದಿಲ್ಲ: ಪ್ರಧಾನಿ ಮೋದಿ
ಮೋದಿ ತುರ್ತು ಪರಿಸ್ಥಿತಿ ಹೇಳಿಕೆಗೆ ಮಲ್ಲಿಕಾರ್ಜುನ ಖರ್ಗೆ ಟಾಂಗ್
'ತುರ್ತು ಪರಿಸ್ಥಿತಿ ಹೇರದೇ ತುರ್ತು ಪರಿಸ್ಥಿತಿಯನ್ನ ನಡೆಸಲಾಗ್ತಿದೆ’
ಇದೇ ಪರಿಸ್ಥಿತಿಯನ್ನ ಎಷ್ಟು ದಿನ ಮುಂದುವರೆಸುತ್ತೀರಿ- ಖರ್ಗೆ
ಇಂದು ರಾಷ್ಟ್ರೀಯ ತುರ್ತು ಪರಿಸ್ಥಿತಿ( National Emergency) ಕರಾಳ ನೆನಪಿಗೆ 50 ವರ್ಷವಾಗಿದ್ದು, ಜೂನ್ 25, 1975ರಲ್ಲಿ ರಾಷ್ಟ್ರೀಯ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿತ್ತು. ಅಂದಿನ ಪ್ರಧಾನಿ ಇಂದಿರಾ ಗಾಂಧಿ (Indira Gandhi) ತುರ್ತುಪರಿಸ್ಥಿತಿ ಘೋಷಣೆ ಮಾಡಿದ್ದು, ಬರೋಬ್ಬರಿ 21 ತಿಂಗಳು ಕಾಲ ತುರ್ತು ಪರಿಸ್ಥಿತಿ ಅಸ್ತಿತ್ವದಲ್ಲಿ ಇತ್ತು. 1975, ಜೂನ್ 25ರಂದು ಭಾರತದ ಇತಿಹಾಸದಲ್ಲಿ ಕರಾಳ ದಿನವಾಗಿತ್ತು. ತುರ್ತು ಪರಿಸ್ಥಿತಿ ಹೇರಿಕೆ ಖಂಡಿಸಿ ದೇಶಾದ್ಯಂತ ಬಿಜೆಪಿ ಪ್ರೊಟೆಸ್ಟ್(BJP protest) ನಡೆಸುತ್ತಿದೆ. ಕರ್ನಾಟಕದಲ್ಲೂ ಕಪ್ಪುಪಟ್ಟಿ ಧರಿಸಿ ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ತುರ್ತು ಪರಿಸ್ಥಿತಿ ಕಪ್ಪು ಚುಕ್ಕೆ. ಸಂವಿಧಾನವನ್ನ ತಿರಸ್ಕರಿಸಿ ತುರ್ತು ಪರಿಸ್ಥಿತಿ ಹೇರಲಾಯ್ತು. ಭಾರತದ ಯುವ ಪೀಳಿಗೆ ಇದನ್ನ ಎಂದು ಮರೆಯೋದಿಲ್ಲ ಎಂದು ಮೋದಿ ಹೇಳಿದ್ದಾರೆ.
ಇದನ್ನೂ ವೀಕ್ಷಿಸಿ: ಡಿಸಿಎಂ ದಂಗಲ್‌ಗೆ ಬ್ರೇಕ್ ಹಾಕುತ್ತಾ ಹೈಕಮಾಂಡ್? ಪಟ್ಟು ಬಿಡದ ನಾಯಕರ ಬೇಡಿಕೆಗೆ ಸಿಗುತ್ತಾ ಗ್ರೀನ್ ಸಿಗ್ನಲ್?