News Hour: ಮುಂದಿನ ಚುನಾವಣೆಗೆ ಬಿಜೆಪಿ ಸಿದ್ಧತೆ, ಕೈ ಬಣ, ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ
ಮುಂದಿನ ಚುನಾವಣೆಗೆ ಬಿಜೆಪಿ ಸಿದ್ಧತೆ, ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ, ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದ ಸಮೀಕ್ಷೆ, ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ, ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್ ಬ್ಲಾಕ್) ಲೋಕಾರ್ಪಣೆ ಸುದ್ದಿ ನ್ಯೂಸ್ ಹವರ್ ನಲ್ಲಿ.
ಬೆಂಗಳೂರು, (ನ.17): ಜಯದೇವ ಹೃದ್ರೋಗ ಆಸ್ಪತ್ರೆಯ ಆವರಣದಲ್ಲಿ ಇನ್ಫೋಸಿಸ್ ಫೌಂಡೇಶನ್ ವತಿಯಿಂದ ನಿರ್ಮಾಣಗೊಂಡಿರುವ ನೂತನ ಕಟ್ಟಡ (ಇನ್ಫೋಸಿಸ್ ಬ್ಲಾಕ್) ಲೋಕಾರ್ಪಣೆಯಾಗಿದೆ.
ಉತ್ತರ ಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆ ಹೇಳಿದೆ. ಆದರೆ ನೂರಕ್ಕೂ ಹೆಚ್ಚು ಸೀಟುಗಳನ್ನು ಕಳೆದುಕೊಳ್ಳಲಿದೆ ಎಂಬ ಎಚ್ಚರಿಕೆಯನ್ನು ನೀಡಿದೆ.
ಮುಂದಿನ ಸಾರ್ವತ್ರಿಕ ಚುನಾವಣೆಗೆ ಬಿಜೆಪಿ ಸಿದ್ಧತೆ ಆರಂಭಿಸಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ನಾಲ್ವರು ಹಿರಿಯ ನಾಯಕರ ನೇತೃತ್ವದ ‘ಜನ ಸ್ವರಾಜ್’ ಯಾತ್ರೆಯು ಗುರುವಾರದಿಂದ ಆರಂಭವಾಗಲಿದೆ.
ಮೂರು ದಿನಗಳ ಬೆಂಗಳೂರು ತಂತ್ರಜ್ಞಾನ ಶೃಂಗ ಸಭೆಗೆ ಚಾಲನೆ ಸಿಕ್ಕಿದೆ. ಆಧುನಿಕ ತಂತ್ರಜ್ಞಾನ, ನಾವೀನ್ಯತೆ , ಸಂಶೋಧನೆ ಮತ್ತು ಜ್ಞಾನದ ಬೆಳವಣಿಗೆಗಳು ದೇಶದ ಕೃಷಿ ಸ್ಥಿತಿಯ ಸುಧಾರಣೆಗೂ ಹೆಚ್ಚು ಒತ್ತು ಕೊಟ್ಟು ಮುನ್ನಡೆಯಬೇಕು ಎಂದು ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ತಿಳಿಸಿದ್ದಾರೆ.