Asianet Suvarna News Asianet Suvarna News

ಹೊಸ ಯೋಜನೆಗಳಿಗೆ ಬ್ರೇಕ್; ಆತ್ಮನಿರ್ಭರ್ ಯೋಜನೆಗೆ ತತಾಸ್ತು

ಕೇಂದ್ರ ಸರ್ಕಾರ ಘೋಷಿಸಿರುವ ಆತ್ಮನಿರ್ಭರ್ ಪ್ಯಾಕೇಜ್ ಅಡಿ ಬರುವ ಯೋಜನೆಗಳನ್ನು ಮಾತ್ರ ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದನ್ನು ಹೊರತುಪಡಿಸಿ ಉಳಿದ್ಯಾವ ಯೋಜನೆಗಳಿಗೂ ಹಣಕಾಸಿನ ನೆರವು ನೀಡುವುದಿಲ್ಲ ಎಂದು ವಿತ್ತ ಸಚಿವಾಲಯ ಎಲ್ಲಾ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಿದೆ.

ನವದೆಹಲಿ(ಜೂ.06): ಕೊರೋನಾ ಸಂಕಷ್ಟ ದೇಶವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಹಳಿ ತಪ್ಪಿರುವ ಆರ್ಥಿಕತೆಯನ್ನು ಮೇಲೆತ್ತಲು ಕೇಂದ್ರ ಸರ್ಕಾರ ಈಗಾಗಲೇ 20 ಲಕ್ಷ ಕೋಟಿ ರುಪಾಯಿ ಮೊತ್ತದ ಆತ್ಮನಿರ್ಭರ್ ಯೋಜನೆಯನ್ನು ಘೋಷಿಸಿದೆ. ಇನ್ನುಳಿದಂತೆ ಯಾವುದೇ ಹೊಸ ಯೋಜನೆ ಜಾರಿಗೊಳಿಸದಿರಲು ಕೇಂದ್ರ ಸರ್ಕಾರ ಮುಂದಾಗಿದೆ.

ಹೌದು, ಕೇಂದ್ರ ಸರ್ಕಾರ ಘೋಷಿಸಿರುವ ಆತ್ಮನಿರ್ಭರ್ ಪ್ಯಾಕೇಜ್ ಅಡಿ ಬರುವ ಯೋಜನೆಗಳನ್ನು ಮಾತ್ರ ಕಾರ್ಯರೂಪಕ್ಕೆ ತರಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ. ಇದನ್ನು ಹೊರತುಪಡಿಸಿ ಉಳಿದ್ಯಾವ ಯೋಜನೆಗಳಿಗೂ ಹಣಕಾಸಿನ ನೆರವು ನೀಡುವುದಿಲ್ಲ ಎಂದು ವಿತ್ತ ಸಚಿವಾಲಯ ಎಲ್ಲಾ ಇಲಾಖೆಗಳಿಗೂ ಸುತ್ತೋಲೆ ಹೊರಡಿಸಿದೆ.

ಮೋದಿ ಸರ್ಕಾರದ ಸಾಧನೆ ಮನೆ ಮನೆಗೆ; ಇಂದಿನಿಂದ ಬಿಜೆಪಿ ‘ಮನೆ ಮನೆ ಅಭಿಯಾನ’

ಕೊರೋನಾ ಸಂಕಷ್ಟದಿಂದಾಗಿ ಹೊಸ ಯೋಜನೆಗಳು ಮಾತ್ರವಲ್ಲ, ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದ್ದ ಯೋಜನೆಗಳಿಗೂ 2021ರ ಮಾರ್ಚ್ 31ರ ವರೆಗೆ ತಡೆ ನೀಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.