ಅಗ್ನಿವೀರರಿಗೆ 1 ಕೋಟಿ ರೂ ವಿಮೆ, ಯೋಜನೆ ಹಿಂಪಡೆಯುವುದಿಲ್ಲ, ಸೇನಾ ಮುಖ್ಯಸ್ಥರ ಸ್ಪಷ್ಟನೆ!

  • ಅಗ್ನಿಪಥ ಯೋಜನೆ ವಿರುದ್ಧ ಪ್ರತಿಭಟನೆ ಕಾವು
  • 3 ಸೇನಾ ಮುಖ್ಯಸ್ಥರ ಸುದ್ದಿಗೋಷ್ಠಿ, ಇಂಚಿಂಚು ಮಾಹಿತಿ
  • ಯೋಜನೆ ಹಿಂಪಡೆಯುವ ಮಾತೇ ಇಲ್ಲ, ಸೇನೆ ಸ್ಪಷ್ಟನೆ

Share this Video
  • FB
  • Linkdin
  • Whatsapp

ನವದೆಹಲಿ(ಜೂ.19): ಅಗ್ನಿಪಥ ಸೇನಾ ನೇಮಕಾತಿ ಯೋಜನೆ ವಿರುದ್ಧ ಪ್ರತಿಭಟನೆ , ಹಿಂಸಾಚಾರ ಹೆಚ್ಚಾಗುತ್ತಿದೆ. ಯೋಜನೆ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈಲಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಇದರ ಬೆನ್ನಲ್ಲೇ ಭಾರತೀಯ ಸೇನೆಯ ಮೂರು ಮುಖ್ಯಸ್ಥರು ಸುದ್ದಿಗೋಷ್ಠಿ ನಡೆಸಿದ್ದಾರೆ. ಅಗ್ನಿವೀರರಿಗೆ 1 ಕೋಟಿ ರೂಪಾಯಿ ಜೀವವಿಮೆ ನೀಡಲಾಗುತ್ತದೆ. ಇನ್ನು ಈ ಯೋಜನೆ ಹಿಂಪಡೆಯುವ ಮಾತೇ ಇಲ್ಲ ಎಂದು ಸೇನಾ ಮುಖ್ಯಸ್ಥರು ಸ್ಪಷ್ಟಪಡಿಸಿದ್ದಾರೆ.

Related Video