ಯಶವಂತಪುರ, ಕೊರೊಮಂಡಲ್ ರೈಲು ಅಪಘಾತ, 50ಕ್ಕೂ ಹೆಚ್ಚು ಸಾವು, 10 ಲಕ್ಷ ರೂ ಪರಿಹಾರ ಘೋಷಣೆ!
ಯಶವಂತಪುರ-ಹೌರ, ಶಾಲಿಮಾರ್ ಚೆನ್ನೈ ನಡುವಿನ ಕೊರಮೆಂಡಲ್ ಎಕ್ಸ್‌ಪ್ರೆಸ್ ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ಸಂಭಲಿಸಿದೆ. 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು. 300ಕ್ಕೂ ಹೆಚ್ಚು ಜನ ಗಂಭೀರವಾಗಿ ಗಾಯಗೊಂಡಿದ್ದಾರೆ.
ಒಡಿಶಾ(ಜೂ.02): ಭಾರತೀಯ ರೈಲು ಇತಿಹಾಸದಲ್ಲಿ ಅತ್ಯಂತ ಭೀಕರ ಅಪಘಾತ ಸಂಭವಿಸಿದೆ. ಎರಡು ಪ್ಯಾಸೆಂಜರ್ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಭೀಕರ ಅಪಘಾತ ನಡೆದಿದೆ. ಶಾಲಿಮಾರ್-ಚೆನ್ನೈ ನಡುವಿನ ಕೊರಮಂಡಲ್ ಎಕ್ಸ್‌ಪ್ರೆಸ್ ರೈಲು, ಬೆಂಗಳೂರಿನ ಯಶವಂತಪುರ-ಹೌರ ರೈಲು ಹಾಗೂ ಗೂಡ್ಸ್ ರೈಲಿನ ನಡುವೆ ಅಪಘಾತ ಸಂಭವಿಸಿದೆ. ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಹೆಚ್ಚಾಗುತ್ತಿದೆ. 20ಕ್ಕೂ ಹೆಚ್ಚು ಬೋಗಿಗಳು ಅಪಘಾತಕ್ಕೆ ತುತ್ತಾಗಿದೆ. 300ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ಮೋದಿ ಸೇರಿದಂತೆ ಹಲವು ಗಣ್ಯರು ಆಘಾತ ಹಾಗೂ ತೀವ್ರ ನೋವು ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅಗತ್ಯ ನೆರವಿಗೆ ಸೂಚನೆ ನೀಡಿದ್ದಾರೆ. ಇತ್ತ ರೈಲ್ವೇ ಇಲಾಖೆ ಮೃತರಿಗೆ 10 ಲಕ್ಷ ರೂಪಾಯಿ, ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂಪಾಯಿ ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದೆ.