ಮತ್ತೆ ಎದುರಾದ ಕೊರೋನಾ ಭೀತಿ: ರಾಜ್ಯದಲ್ಲಿ ಒಮಿಕ್ರಾನ್ ರೂಪಾಂತರಿಯ ಆತಂಕ
ದೇಶದಲ್ಲಿ ಮತ್ತೆ ಮಹಾಮಾರಿ ಕೊರೋನಾ ಭೀತಿ ಉಂಟಾಗಿದ್ದು, ರಾಜ್ಯದಲ್ಲಿ ಒಮಿಕ್ರಾನ್ ಆತಂಕ ಶುರುವಾಗಿದೆ.
ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ ಪತ್ತೆಯಾಗಿದ್ದು, ರಾಜ್ಯಕ್ಕೆ ಹೊಸ ತಳಿಯ ಆತಂಕ ಎದುರಾಗಿದೆ. ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ರೂಪಾಂತರಿ BQ.1 ತಳಿ ಪತ್ತೆಯಾಗಿದ್ದು, ರಾಜ್ಯದಲ್ಲಿ ಕಟ್ಟೆಚ್ಚರ ವಹಿಸಲು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಪ್ರತಿಯೊಬ್ಬರು ತಪ್ಪದೇ 3ನೇ ಡೋಸ್ ಪಡೆಯಿರಿ ಎಂದು ಸಚಿವ ಡಾ.ಕೆ ಸುಧಾಕರ್ ಮನವಿ ಮಾಡಿದ್ದಾರೆ. ಪ್ರತಿಯೊಬ್ಬರೂ ಬೂಸ್ಟರ್ ಡೋಸ್ ಪಡೆಯಲು ಸೂಚನೆ ನೀಡಿಲಾಗಿದ್ದು, ಪಾಸಿಟಿವ್ ಇದ್ದಲ್ಲಿ ಪ್ರತ್ಯೇಕವಾಗಿದ್ದು ಚಿಕಿತ್ಸೆ ಪಡೆಯಲು ತಿಳಿಸಲಾಗಿದೆ.