18 ತಿಂಗಳಲ್ಲಿ 10 ಲಕ್ಷ ಉದ್ಯೋಗ ನೇಮಕಾತಿ, ಸಂಚಲನ ಸೃಷ್ಟಿಸಿದ ಪ್ರಧಾನಿ ಮೋದಿ ಘೋಷಣೆ!
- ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿ ಆರಂಭ
- ಮೋದಿ ಸೂಚನೆ ಬೆನ್ನಲ್ಲೇ ನೇಮಕಾತಿ ಪ್ರಕ್ರಿಯೆಗೆ ವೇಗ
- ಅತೀ ದೊಡ್ಡ ನೇಮಕಾತಿ ದಾಖಲೆಗೆ ಸಜ್ಜಾದ ಭಾರತ
ಕೇಂದ್ರ ಸಚಿವಾಲಯ,ಇಲಾಖೆಗಳಲ್ಲಿ 10 ಲಕ್ಷ ಜನರ ನೇಮಕಕ್ಕೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ಹೊರಡಿಸಿದ್ದಾರೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಎಲ್ಲಾ ಇಲಾಖೆಗಳು ಮತ್ತು ಸಚಿವಾಲಯಗಳಲ್ಲಿನ ಮಾನವ ಸಂಪನ್ಮೂಲ ಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಮುಂದಿನ ಒಂದೂವರೆ ವರ್ಷಗಳಲ್ಲಿ 10 ಲಕ್ಷ ಜನರನ್ನು ಮಿಷನ್ ಮೋಡ್‌ನಲ್ಲಿ ಸರ್ಕಾರದಿಂದ ನೇಮಕಾತಿ ಮಾಡುವಂತೆ ಸೂಚನೆ ನೀಡಿದ್ದಾರೆ. ಈ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.