ಪಾಕಿಸ್ತಾನ ಪ್ರಶ್ನಿಸದ ಕಾಂಗ್ರೆಸ್ ನನ್ನನ್ನು ಪ್ರಶ್ನಿಸುತ್ತದೆ: ಮೋದಿ ಗುಡುಗು!

ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ,  ಶಿವಕುಮಾರ್ ಶ್ರೀಗಳ ಗದ್ದುಗೆಗೆ ಆರತಿ ಬೆಳಗವು ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಹೊಸ ವರ್ಷದಲ್ಲಿ ನವಭಾರತದ ಕನಸು ನನಸಾಗಲಿ ಎಂದು ಹಾರೈಸಿದರು.

Share this Video
  • FB
  • Linkdin
  • Whatsapp

ತುಮಕೂರು(ಜ.02): ಇಲ್ಲಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ, ಶಿವಕುಮಾರ್ ಶ್ರೀಗಳ ಗದ್ದುಗೆಗೆ ಆರತಿ ಬೆಳಗವು ಮೂಲಕ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಪ್ರಧಾನಿ ಮೋದಿ, ಹೊಸ ವರ್ಷದಲ್ಲಿ ನವಭಾರತದ ಕನಸು ನನಸಾಗಲಿ ಎಂದು ಹಾರೈಸಿದರು. ಇದೇ ವೇಳೆ ಪ್ರಸಕ್ತ ರಾಜಕೀಯ ವಿದ್ಯಮಾನಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿ ಹೋರಾಟಕ್ಕೆ ಕುಮ್ಮಕ್ಕು ನೀಡುತ್ತಿರುವ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಂಡರು. ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಅಫ್ಘಾನಿಸ್ತಾನದಲ್ಲಿ ದೌರ್ಜನ್ಯಕ್ಕೀಡಾಗಿರುವ ಧಾರ್ಮಿಕ ಅಲ್ಪಸಂಖ್ಯಾತರ ಕ್ಷೇಮಾಭಿವೃದ್ಧಿ ಭಾರತದ ಜವಾಬ್ದಾರಿ ಎಂದು ಹೇಳಿದರು.


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

ಜನವರಿ 2ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Related Video