
ಪ್ರಧಾನಿ ಮೋದಿಯಿಂದ ಕೆಂಪೇಗೌಡರ ಪ್ರತಿಮೆ ಅನಾವರಣ, ಕಾಂಗ್ರೆಸ್ ಜೆಡಿಎಸ್ ಕೆಂಡಾಮಂಡಲ!
ರಾಜೀವ್ ಗಾಂಧಿ ಹಂತಕರಿಗೆ ಬಿಡುಗಡೆಗೆ ಸುಪ್ರೀಂ ಆದೇಶ, ಕನಕ, ವಾಲ್ಮೀಕಿ ಪ್ರತಿಮೆಗೆ ಮೋದಿ ಪುಷ್ಪಾರ್ಚನೆ ಹಿಂದೆ ರಾಜಕೀಯ ಲೆಕ್ಕಾಚಾರ, ಬೆಂಗಳೂರಿನಲ್ಲಿ ನಮೋ ಮೇನಿಯಾ ಸೇರಿದಂತೆ ಇಂದಿನ ನ್ಯೂಸ್ ಹವರ್ ವಿಡಿಯೋ ಇಲ್ಲಿದೆ
ಪ್ರಧಾನಿ ನರೇಂದ್ರ ಮೋದಿ ಇಂದು ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡಿದ್ದಾರೆ. ಇದೇ ವೇಳೆ ವಂದೇ ಭಾರತ್ ರೈಲಿಗೆ ಚಾಲನೆ ಸೇರಿದಂತೆ 5 ಕಾರ್ಯಕ್ರಮಗಳಲ್ಲಿ ಮೋದಿ ಪಾಲ್ಗೊಂಡರು. ವಾಲ್ಮೀಕಿ, ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಹಾಗೂ ಕೆಂಪೇಗೌಡರ ಪ್ರತಿಮೆ ಅನಾವರಣ ವಿಚಾರದಲ್ಲಿ ಬಿಜೆಪಿ ರಾಜಕೀಯ ಮಾಡಿದೆ ಎಂದು ಕಾಂಗ್ರೆಸ್ ಹಾಗೂ ಜೆಡಿಎಸ್ ಆರೋಪಿಸಿದೆ. ಪ್ರತಿಮೆ ನಿರ್ಮಾಣಕ್ಕೆ ಸರ್ಕಾರದ ದುಡ್ಡು ಖರ್ಚು ಮಾಡಿದ್ದು ಯಾಕೆ? ವಿಮಾನ ನಿಲ್ದಾಣ ನಿರ್ವಹಣೆ ಮಾಡುತ್ತಿರುವ ಖಾಸಗಿ ಕಂಪನಿಗಳ ನಿರ್ಮಾಣ ಮಾಡಬೇಕಿತ್ತು ಎಂದು ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಇತ್ತ ಬಿಜೆಪಿ ನಾಯಕರು ತಿರುಗೇಟು ನೀಡಿದ್ದಾರೆ.ಪ್ರಧಾನಿ ಮೋದಿಯ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ದೇವೇಗೌಡರನ್ನು ಆಹ್ವಾನಿಸಿಲ್ಲ ಎಂದು ಜೆಡಿಎಸ್ ಆರೋಪಿಸಿದೆ. ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ. ರಾಜಕೀಯಕ್ಕಾಗಿ ಅವರ ಹೆಸರನ್ನು ಬಳಸಿಕೊಳ್ಳುವುದು ಅಪಮಾನ ಎಂದು ಜೆಡಿಎಸ್ ಹೇಳಿದೆ. ಇದಕ್ಕೆ ಬಿಜೆಪಿ ಸ್ಪಷ್ಟನೆ ನೀಡಿದೆ.