Asianet Suvarna News Asianet Suvarna News

1 ಲಕ್ಷ ಕೋಟಿ ಕೃಷಿ ಸೌಕರ್ಯ ಉದ್ಘಾಟಿಸಿದ ಪಿಎಂ: ಕಿಸಾನ್ ಯೋಜನೆಯ 6ನೇ ಕಂತು ಬಿಡುಗಡೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ನವದೆಹಲಿ(ಆ.09);ಪ್ರಧಾನ ಮಂತ್ರಿ ನರೇಂದ್ರ ಮೋದಿ ಭಾನುವಾರ 1 ಲಕ್ಷ ಕೋಟಿ ರೂಪಾಯಿಗಳ ಕೃಷಿ ಮೂಲ ಸೌಕರ್ಯ ನಿಧಿ ಯೋಜನೆಯನ್ನು ಉದ್ಘಾಟಿಸಿದ್ದಾರೆ. 

ದೆಹಲಿಯಲ್ಲಿ ವಿಡಿಯೊ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಇದರಿಂದ ಕೃಷಿ-ಉದ್ಯಮಿಗಳು, ಕೃಷಿ-ತಂತ್ರಜ್ಞಾನಿಗಳು, ರೈತ ಗುಂಪುಗಳಿಗೆ ಸಹಾಯವಾಗಲಿದೆ ಎಂದರು.

ಕೃಷಿ ಮೂಲ ಸೌಕರ್ಯ ನಿಧಿ 2029ರವರೆಗೆ 10 ವರ್ಷಗಳ ಕಾಲಾವಧಿಯನ್ನು ಇದು ಹೊಂದಿರುತ್ತದೆ. ರೈತರ ಬೆಳೆಯ ಸುಗ್ಗಿಯ ನಂತರ ಕೃಷಿ ಮೂಲಸೌಕರ್ಯಗಳ ನಿರ್ವಹಣೆಗೆ, ಸಮುದಾಯ ಬೆಳೆ ಸಂಪತ್ತುಗಳಿಗೆ, ಕೃಷಿ ಆಸ್ತಿಗಳನ್ನು ಪೋಷಿಸಲು ಆರ್ಥಿಕ ಬೆಂಬಲವಾಗಿ ಮತ್ತು ಬಡ್ಡಿ ರೂಪದಲ್ಲಿ ಹೂಡಿಕೆ ಮಾಡಲು ಸರ್ಕಾರದಿಂದ ಮಧ್ಯಮದಿಂದ ದೀರ್ಘಾವಧಿಯವರೆಗೆ ಸಾಲದ ಹಣಕಾಸು ನೆರವು ನೀಡುವ ಯೋಜನೆಯಾಗಿದೆ. 

Video Top Stories