ಎಲ್ಲಿದೆ ಬಂಧನ ಶಿಬಿರ?: ದೆಹಲಿಯಲ್ಲಿ ಪ್ರಧಾನಿ ಸಮರ!
ದೆಹಲಿಯಲ್ಲಿ ಪ್ರಧಾನಿ ಮೋದಿ ನೇತೃತ್ವದಲ್ಲಿ ಬಿಜೆಪಿ ಬೃಹತ್ ಸಮಾವೇಶ| ಪೌರತ್ವ ಕಾಯ್ದೆ ವಿರೋಧಿ ಹೋರಾಟಕ್ಕೆ ಪ್ರಧಾನಿ ಮೋದಿ ತಿರುಗೇಟು| ಪೌರತ್ವ ಕಾಯ್ದೆಯಿಂದ ಜನತೆಯ ಉಜ್ವಲ ಭವಿಷ್ಯಕ್ಕೆ ಮುನ್ನುಡಿ| ದೆಹಲಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ| ‘ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸುವ ವಿಪಕ್ಷಗಳಿಂದ ಕೀಳು ರಾಜಕೀಯ’|
ನವದೆಹಲಿ(ಡಿ.22): ಪೌರತ್ವ ತಿದ್ದುಪಡಿ ಕಾಯ್ದೆಯನ್ನು ದೇಶದ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಜಾರಿಗೆ ತರಲಾಗಿದೆ ಎಂದು ಪ್ರಧಾನಿ ಮೋದಿ ಸಮರ್ಥನೆ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆಯಿಂದ ಸಮಾಜದ ದೀನದಲಿತರು,ಬಡವರು ಮತ್ತು ಶೋಷಣೆಗೊಳಗಾದವರ ಉದ್ಧಾರವಾಗಲಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬಿಜೆಪಿ ಆಯೋಜಿಸಿದ್ದ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿಪಕ್ಷಗಳು ತಮ್ಮ ರಾಜಕೀಯ ಲಾಭಕ್ಕಾಗಿ ಅಲ್ಪಸಂಖ್ಯಾತರ ದಾರಿ ತಪ್ಪಿಸುತ್ತಿವೆ ಎಂದು ಹರಿಹಾಯ್ದರು. ಕಳೆದ ಸಂಸತ್ತಿನ ಚಳಿಗಾಲ ಅಧಿವೇಶನದಲ್ಲಿ ಪೌರತ್ವ ತಿದ್ದುಪಡಿ ಮಸೂದೆ ಅನುಮೋದಿಸಲಾಗಿದೆ. ಸಂಸತ್ತಿನ ಎರಡೂ ಸದನಗಳಲ್ಲಿ ಅನುಮೋದನೆಯಾಗಿ ಕಾಯ್ದೆಯಾಗಿ ಜಾರಿಗೆ ಬಂದಿದ್ದು, ಜನರ ತೀರ್ಪನ್ನು ಮತ್ತು ಸಂಸತ್ತನ್ನು ಎಲ್ಲರೂ ಗೌರವಿಸಬೇಕು ಎಂದು ಮೋದಿ ಹೇಳಿದರು.