Modi Security Breach: ಫ್ಲೈಓವರ್‌ ಮೇಲೇ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

First Published Jan 7, 2022, 11:16 AM IST | Last Updated Jan 7, 2022, 11:16 AM IST

ಚಂಡೀಗಢ(ಜ.07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಆತಂಕಕಾರಿ ಘಟನೆ ಬುಧವಾರ ನಡೆದಿತ್ತು. ಪರಿಣಾಮ, ಅತ್ಯಂತ ಬಿಗಿಭದ್ರತೆ ವ್ಯವಸ್ಥೆ ಹೊಂದಿರುವ ಪ್ರಧಾನಿ, ಫ್ಲೈಓವರ್‌ ಮೇಲೇ 20 ನಿಮಿಷಗಳನ್ನು ಅತಂತ್ರರಾಗಿ ಕಳೆದಿದ್ದರು. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

PM Modi Security Breach: ಮೋದಿ ರ‍್ಯಾಲಿ ವಿಫಲಕ್ಕೆ ಖಲಿಸ್ತಾನಿ ಉಗ್ರ ಸಂಚು?

ಇದರ ಬೆನ್ನಲ್ಲೇ ಮೋದಿ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಿ ದೆಹಲಿಗೆ ಮರಳಿದ್ದರು. ಘಟನೆಯನ್ನು ಅತ್ಯಂತ ಗಂಭೀರ ಎಂದಿರುವ ಕೇಂದ್ರ ಗೃಹ ಸಚಿವಾಲಯ, ಈ ಕುರಿತು ಪಂಜಾಬ್‌ ಸರ್ಕಾರದಿಂದ ವಿಸ್ತೃತ ವರದಿ ಕೇಳಿದ್ದು, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ತಾಕೀತು ಮಾಡಿದೆ. ಈ ನಡುವೆ, ಭಾರತೀಯ ಕಿಸಾನ್‌ ಯೂನಿಯನ್‌ (ಕ್ರಾಂತಿಕಾರಿ) ಎಂಬ ಸಂಘಟನೆ ಈ ಘಟನೆಯ ಹೊಣೆ ಹೊತ್ತಿದೆ.

ಸದ್ಯ ಪ್ರಧಾನಿ ಮೋದಿ ಫ್ಲೈಓವರ್‌ನಲ್ಲಿ ಸಿಕ್ಕಾಕೊಂಡ ಕ್ಷಣದ Exclusive ದೃಶ್ಯಾವಳಿಗಳು ಲಭ್ಯವಾಗಿವೆ.