PM Modi Security Breach: ಸುಪ್ರೀಂ ಅಂಗಳ ತಲುಪಿದ ಭದ್ರತಾ ಲೋಪ, ಎಲ್ಲರ ಚಿತ್ತ ತೀರ್ಮಾನದತ್ತ!

ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದೆ.  

First Published Jan 7, 2022, 2:18 PM IST | Last Updated Jan 7, 2022, 2:35 PM IST

ನವದೆಹಲಿ (ಜ. 07): ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಪಂಜಾಬ್‌ಗೆ (Punjab) ತೆರಳಿದ್ದ ಪ್ರಧಾನಿ ನರೇಂದ್ರ ಮೋದಿ (PM Modi) ಅವರನ್ನು ರೈತರ ತಂಡವೊಂದು ಫ್ಲೈಓವರ್‌ವೊಂದರ ಮೇಲೆ ತಡೆಗಟ್ಟಿದ ಘಟನೆ ಬೇರೆ ಬೇರೆ ಆಯಾಮ ಪಡೆದುಕೊಳ್ಳುತ್ತಿದೆ. ಇದು ಪ್ರಧಾನಿಯಂತಹ ಅತಿಗಣ್ಯರ ವಿಷಯದಲ್ಲಿ ಕಂಡು ಕೇಳರಿಯದ ಭದ್ರತಾ ಲೋಪ ಎನ್ನಿಸಿಕೊಂಡಿದೆ.

PM Modi Security Breach: ಫ್ಲೈ ಓವರ್ ಮೇಲೆ 20 ನಿಮಿಷ ಅತಂತ್ರರಾಗಿ ಕಳೆದ ಮೋದಿ, Exclusive ವೈರಲ್!

ತಮ್ಮ ಪಂಜಾಬ್‌ ಭೇಟಿ ವೇಳೆ ಭಾರಿ ಭದ್ರತಾ ಲೋಪ ಉಂಟಾದ ಘಟನೆ ಕುರಿತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರನ್ನು ಭೇಟಿ ಮಾಡಿ ವಿವರಣೆ ನೀಡಿದ್ದಾರೆ. ಇದೇ ವೇಳೆ, ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರು ಕೂಡ ಪ್ರಧಾನಿ ಜತೆ ಮಾತನಾಡಿ, ಘಟನೆಯ ಕುರಿತು ತೀವ್ರ ಕಳವಳ ತೋಡಿಕೊಂಡಿದ್ದಾರೆ. 

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ವೇಳೆ ಭಾರಿ ಭದ್ರತಾ ಲೋಪ ಉಂಟಾದ ಘಟನೆ ಕುರಿತು ವಿಸ್ತೃತ ತನಿಖೆ ನಡೆಸಲು ಪಂಜಾಬ್‌ ಸರ್ಕಾರ ಇಬ್ಬರು ಸದಸ್ಯರನ್ನು ಒಳಗೊಂಡ ಅತ್ಯುನ್ನತ ಸಮಿತಿಯೊಂದನ್ನು ರಚನೆ ಮಾಡಿದೆ. ಮೂರು ದಿನದಲ್ಲಿ ವರದಿ ಸಲ್ಲಿಸುವಂತೆ ಸೂಚನೆ ನೀಡಿದೆ. ಇದೇ ವೇಳೆ, ಭದ್ರತಾ ಲೋಪ ಪ್ರಕರಣ ಸುಪ್ರೀಂಕೋರ್ಟ್‌ ಮೆಟ್ಟಿಲೇರಿದೆ. ಈ ಸಂಬಂಧ ಹಿರಿಯ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದು, ಶುಕ್ರವಾರ ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ. ನ್ಯಾಯಾಲಯದ ತೀರ್ಪು ಪಂಜಾಬ್ ಸರ್ಕಾರಕ್ಕೆ ಯಾವ ರೀತಿ ಬಿಸಿ ಮುಟ್ಟಿಸುತ್ತದೆ..? ನೋಡಬೇಕಿದೆ. 
 

Video Top Stories