ಯಾವುದೇ ಸಮಯದಲ್ಲಿ ಕೋವಿಡ್ ವ್ಯಾಕ್ಸಿನ್ ಸಿಗಬಹುದು; ದೇಶದ ಜನರಿಗೆ ಮೋದಿ ಭರವಸೆ
ಕೊರೊನಾ ಲಸಿಕೆ ಹಂಚಿಕೆ ಸಂಬಂಧ ಇಂದು ಪ್ರಧಾನಿ ಮೋದಿ 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ ಅಂಶಗಳು.
ನವದೆಹಲಿ (ನ. 24): ಕೊರೊನಾ ಲಸಿಕೆ ಹಂಚಿಕೆ ಸಂಬಂಧ ಇಂದು ಪ್ರಧಾನಿ ಮೋದಿ 8 ರಾಜ್ಯಗಳ ಸಿಎಂಗಳ ಜೊತೆ ಚರ್ಚೆ ನಡೆಸಿದ್ದಾರೆ. ಚರ್ಚೆಯಲ್ಲಿ ಪ್ರಧಾನಿ ಮೋದಿ ಪ್ರಸ್ತಾಪಿಸಿದ ಅಂಶಗಳು.
'ಮೊದ, ಮೊದಲು ಕೋವಿಡ್ ನಿಯಂತ್ರಣ ಕಷ್ಟವಾಗಿತ್ತು. ಹಂತ ಹಂತವಾಗಿ ನಿಯಂತ್ರಿಸುವಲ್ಲಿ ಯಶಸ್ವಿಯಾದೆವು. ದೇಶದಲ್ಲಿ ಸೋಂಕು ನಿಯಂತ್ರಣಕ್ಕೆ ಬಂದಿದೆ. ಯಾವಾಗ ವ್ಯಾಕ್ಸಿನ್ ಸಿಗುತ್ತದೆ ಎಂಬುದಕ್ಕೆ ಖಾತರಿ ಇಲ್ಲ. ದೇಶದ ವಿಜ್ಞಾನಿಗಳು ಸಂಶೋಧನೆ ಮುಂದುವರೆಸಿದ್ದಾರೆ' ಎಂದು ಮೋದಿ ಹೇಳಿದ್ದಾರೆ.
'ವ್ಯಾಕ್ಸಿನ್‌ಗಾಗಿ ಹಲವು ದೇಶಗಳ ಜೊತೆ ಸಂಪರ್ಕದಲ್ಲಿದ್ದೇವೆ. ಕೋಲ್ಡ್ ಸ್ಟೋರೇಜ್ ವ್ಯವಸ್ಥೆಗಾಗಿ ಈಗಿನಿಂದಲೇ ಸಿದ್ಧತೆ ನಡೆಸಬೇಕು. ದೇಶದ ಕಟ್ಟ ಕಡೆಯ ವ್ಯಕ್ತಿಗೂ ವ್ಯಾಕ್ಸಿನ್ ಸಿಗಲಿದೆ' ಎಂದು ಮೋದಿ ಭರವಸೆ ನೀಡಿದ್ದಾರೆ.