
ಒಡಿಶಾದಲ್ಲಿ ಭೀಕರ ರೈಲು ಅಪಘಾತ: ಅಧಿಕಾರಿಗಳ ಜೊತೆ ಮೋದಿ ಸಭೆ, ಘಟನಾ ಸ್ಥಳಕ್ಕೆ ಸಂತೋಷ್ ಲಾಡ್ ಭೇಟಿ
ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿಯವರ ಎಲ್ಲಾ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಅಧಿಕಾರಿಗಳ ಜೊತೆ ಪ್ರಧಾನಿ ಸಭೆ ನಡೆಸಿ, ಮಾಹಿತಿ ಪಡೆದುಕೊಂಡರು.
ಒಡಿಶಾದಲ್ಲಿ 3 ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಈ ಭಾಗದಲ್ಲಿ ಸಾಗಬೇಕಿದ್ದ ರೈಲುಗಳ ಸಂಚಾರ ರದ್ದುಗೊಳಿಸಲಾಗಿದೆ. ಈ ದುರಂತದಲ್ಲಿ ಸಿಕ್ಕಿಹಾಕಿಕೊಂಡಿದ್ದ ಕನ್ನಡಿಗರು ಸೇಫ್ ಆಗಿದ್ದಾರೆ ಎಂದು ತಿಳಿದುಬಂದಿದೆ. 5 ಎನ್‌ಡಿಆರ್‌ಎಫ್, 200 ಪೊಲೀಸ್ ಸಿಬ್ಬಂದಿ ರಕ್ಷಣಾ ಕಾರ್ಯ ನಡೆಸುತ್ತಿದ್ದಾರೆ. ಅಲ್ಲದೇ ರೈಲ್ವೆ ದುರಂತ ಹಿನ್ನೆಲೆ ಪ್ರಧಾನಿ ಮೋದಿ ಅವರ ಎಲ್ಲಾ ಕಾರ್ಯಕ್ರಮವನ್ನು ರದ್ದು ಪಡಿಸಲಾಗಿದೆ. ಮೋದಿ ಅಧಿಕಾರಿಗಳ ಜೊತೆ ಈ ಘಟನೆಗೆ ಸಂಬಂಧಿಸಿದಂತೆ ಸಭೆ ನಡೆಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ. ಇನ್ನೂ ರಂತ ನಡೆದ ಸ್ಥಳಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡುವ ಸಾಧ್ಯತೆ ಇದೆ. ಅಲ್ಲದೇ ಸಿಎಂ ಸಿದ್ದರಾಮಯ್ಯ ಸೂಚನೆ ಮೇರೆಗೆ ಸಚಿವ ಸಂತೋಷ್ ಲಾಡ್ ಘಟನಾ ಸ್ಥಳಕ್ಕೆ ಹೋಗುತ್ತಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಇದನ್ನೂ ವೀಕ್ಷಿಸಿ: Odisha Train Accident:ರೈಲು ದುರಂತದಲ್ಲಿ 233ಕ್ಕೂ ಹೆಚ್ಚು ಮಂದಿ ಸಾವು, 900 ಜನರಿಗೆ ಗಾಯ: ಮುಂದುವರೆದ ರಕ್ಷಣಾ ಕಾರ್ಯಾಚರಣೆ