
ರಜೌರಿ ಹಾಗೂ ನೌಶೇರಾ ಗಡಿಯಲ್ಲಿ ಯೋಧರೊಂದಿಗೆ ಮೋದಿ ದೀಪಾವಳಿ
ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಅವರು ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ರಜೌರಿ ಹಾಗೂ ನೌಶೇರಾ ಗಡಿಗೆ ಭೇಟಿ ನೀಡಿದ್ದಾರೆ.
ನವದೆಹಲಿ (ನ. 04): ಈ ವರ್ಷವೂ ಪ್ರಧಾನಿ ನರೇಂದ್ರ ಮೋದಿ (Narendra Modi) ಭಾರತೀಯ ಯೋಧರೊಂದಿಗೆ ದೀಪಾವಳಿಯನ್ನು ಆಚರಿಸಲಿದ್ದಾರೆ. ಅವರು ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ರಜೌರಿ ಹಾಗೂ ನೌಶೇರಾ (Nowshera) ಗಡಿಗೆ ಭೇಟಿ ನೀಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
News Hour: ಪೆಟ್ರೋಲ್ ಭಾರೀ ಇಳಿಕೆ, ಜಾಗತಿಕ ಮನ್ನಣೆಗೆ ಭಾರತದ ಲಸಿಕೆ
2014 ರಂದು ಮೋದಿ ಪ್ರಧಾನಿಯಾಗಿ ಅಧಿಕಾರವನ್ನು ಸ್ವೀಕರಿಸಿದ ನಂತರ ಈ ಪರಂಪರೆಯನ್ನು ಮುಂದುವರೆಸಿಕೊಂಡು ಬಂದಿದ್ದಾರೆ. ಕಳೆದ ವರ್ಷವೂ ಪ್ರಧಾನಿ ರಾಜಸ್ಥಾನದ ಜೈಸಲ್ಮೇರ್‌ನ ಲೊಂಗೇವಾಲಾ ಗಡಿಯಲ್ಲಿ ಯೋಧರೊಂದಿಗೆ ದೀಪಗಳನ್ನು ಹಚ್ಚಿ ದೀಪಾವಳಿಯನ್ನು ಆಚರಿಸಿದ್ದರು. ಹಾಗೆಯೇ ಈ ವರ್ಷ ಜಮ್ಮು ಮತ್ತು ಕಾಶ್ಮೀರದ ನೌಶೇರಾ ಮತ್ತು ರಾಜೌರಿ ಗಡಿಗಳಲ್ಲಿ ದೀಪಾವಳಿಯನ್ನು ಆಚರಿಸಲು ಮೋದಿ ಅಲ್ಲಿಗೆ ತೆರಳಿದ್ದಾರೆ.