ಕನ್ನಡಿಗನಿಂದ ಕನ್ನಡದಲ್ಲಿ ವಿವರಣೆ: ಶೂಟೌಟ್ ಬಗ್ಗೆ ವಿಶ್ವನಾಥ್ ಸರ್ ಹೇಳಿದ್ದಿಷ್ಟು!

ದಿಶಾ ಹತ್ಯಾಚಾರ ಆರೋಪಿಗಳ ಎನ್‌ಕೌಂಟರ್ ಕುರಿತು ಸೈಬರಾಬಾದ್ ಪೊಲೀಸ್ ಆಯುಕ್ತ, ಕನ್ನಡಿಗ ವಿಶ್ವನಾಥ್ ಸಜ್ಜನರ್ ಮಾಹಿತಿ ನೀಡಿದ್ದಾರೆ.

First Published Dec 6, 2019, 4:40 PM IST | Last Updated Dec 6, 2019, 5:13 PM IST

ಹೈದರಾಬಾದ್(ಡಿ.06): ದಿಶಾ ಹತ್ಯಾಚಾರ ಆರೋಪಿಗಳ ಎನ್‌ಕೌಂಟರ್ ಕುರಿತು ಸೈಬರಾಬಾದ್ ಪೊಲೀಸ್ ಆಯುಕ್ತ, ಕನ್ನಡಿಗ ವಿಶ್ವನಾಥ್ ಸಜ್ಜನರ್ ಮಾಹಿತಿ ನೀಡಿದ್ದಾರೆ. ದಿಶಾ ಅತ್ಯಾಚಾರ ಹಾಗೂ ಹತ್ಯೆ, ಆರೋಪಿಗಳ ಬಂಧನ, ತನಿಖೆ ಹಾಗೂ ಎನ್‌ಕೌಂಟರ್ ಕುರಿತು ವಿಶ್ವನಾಥ್ ಸುದೀರ್ಘವಾಗಿ ಮಾಹಿತಿ ನೀಡಿದರು. ಘಟನೆಯ ಮರುಸೃಷ್ಟಿಗಾಗಿ ಆರೋಪಿಗಳನ್ನು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ, ಆರೋಪಿಗಳು ಪೊಲೀಸರ ಗನ್ ಕಸಿದುಕೊಂಡು ಗುಂಡು ಹಾರಿಸಿದರು ಎಂದು ವಿಶ್ವನಾಥ್ ಸ್ಪಷ್ಟಪಡಿಸಿದರು. ಈ ವೇಳೆ ಶರಣಾಗುವಂತೆ ಮಾಡಿದ ಮನವಿಗೆ ಸ್ಪಂದಿಸದೇ ಇದ್ದಾಗ ಆತ್ಮರಕ್ಷಣೆಗಾಗಿ ಪೋಲೀಸರು ಹಾರಿಸಿದ ಗುಂಡಿನಿಂದ ಎಲ್ಲಾ ನಾಲ್ವರು ಆರೋಪಿಗಳು ಹತರಾದರು ಎಂದು ಅವರು ಹೇಳಿದರು. ಹುಬ್ಬಳ್ಳಿ ಮೂಲದವರಾದ ವಿಶ್ವನಾಥ್ ಕನ್ನಡದಲ್ಲೂ ಘಟನೆಯ ಸಂಪೂರ್ಣ ಮಾಹಿತಿ ನೀಡಿದ್ದು ವಿಶೇಷವಾಗಿತ್ತು.

 

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

ಡಿಸೆಂಬರ್ 6ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Video Top Stories