Asianet Suvarna News Asianet Suvarna News

ನಾನು ಯಾರನ್ನೂ ಹಾದಿ ತಪ್ಪಿಸಿಲ್ಲ, ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಮಾತು!

Feb 8, 2021, 3:34 PM IST

ನವದೆಹಲಿ(ಫೆ.08) ಕೇಂದ್ರ ಸರ್ಕಾರದ ವಿವಾದಿತ ಕೃಷಿ ಕಾನೂನಿನ ಕುರಿತಂತೆ ಭುಗಿಲೆದ್ದಿರುವ ಪ್ರತಿಭಟನೆ ಕುರಿತು ಇದೇ ಮೊದಲ ಬಾರಿಗೆ ರಾಜ್ಯಸಭೆಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, ವಿದೇಶಿ ವಿನಾಶಕಾರಿ ಸಿದ್ಧಾಂತದಿಂದ ನಾವು ರಕ್ಷಿಸಬೇಕಿದೆ ಎಂದು ಹೇಳಿದ್ದಾರೆ.

ಇದೇ ವೇಳೆ ಕೃಷಿ ಸುಧಾರಣೆ ವಿಚಾರವಾಗಿ ಕಾಂಗ್ರೆಸ್ ವಿರುದ್ಧವೂ ಕಿಡಿಕಾರಿದ ಪ್ರಧಾನಿ ಮೋದಿ, ಈ ಹಿಂದೆ ಯಾವ ಕಾಂಗ್ರೆಸ್ ಪಕ್ಷ ಕೃಷಿ ಸುಧಾರಣೆ ಜಾರಿಗೆ ತರಲು ಮುಂದಾಗಿತ್ತೋ.. ಅದೇ  ಪಕ್ಷ ಇಂದು ತನ್ನದೇ ನಿಲುವಿನಿಂದ ಯೂಟರ್ನ್ ಹೊಡೆದಿದೆ. ದೇಶದಲ್ಲಿ ಹೊಸ ತಳಿಯ ಪ್ರತಿಭಟನಾಕಾರರು ಮತ್ತು ಚಳುವಳಿಗಳು ಹುಟ್ಟಿಕೊಂಡಿವೆ. ಈ ಬಗ್ಗೆ ಎಚ್ಚರದಿಂದಿರಬೇಕು. ದೇಶದಲ್ಲಿ ಹೊಸ ಎಫ್‌ಡಿಐ (ವಿದೇಶಿ ವಿನಾಶಕಾರಿ ಐಡಿಯಾಲಜಿ) ಹೊರಹೊಮ್ಮಿದೆ ಮತ್ತು ಅಂತಹ ಸಿದ್ಧಾಂತದಿಂದ ದೇಶವನ್ನು ಉಳಿಸಲು ನಾವು ಹೆಚ್ಚು ಜಾಗೃತರಾಗಿರಬೇಕು ಎಂದು ಹೇಳಿದರು.

ರೈತನನ್ನು ಸಬಲೀಕರಣಗೊಳಿಸುವ ಉದ್ದೇಶದಿಂದ 2014 ರಿಂದ ತಮ್ಮ ಸರ್ಕಾರವು ಕೃಷಿ ಕ್ಷೇತ್ರದಲ್ಲಿ ಬದಲಾವಣೆಗಳನ್ನು ಪ್ರಾರಂಭಿಸಿದೆ. ಬೆಳೆ ವಿಮೆ ಯೋಜನೆಯನ್ನು ಹೆಚ್ಚು ರೈತ ಸ್ನೇಹಿಯನ್ನಾಗಿ ಮಾಡಲು ಬದಲಾಯಿಸಲಾಯಿತು. ಪಿಎಂ ಕಿಸಾನ್ ಸಮ್ಮನ್ ನಿಧಿ ಅವರ ಅಡಿಯಲ್ಲಿ ರೈತರ ಖಾತೆಗೆ 1.15 ಲಕ್ಷ ಕೋಟಿ ರೂ. ಪಾವತಿಸಲಾಗಿದೆ. ಬೆಳೆ ವಿಮೆಯಡಿ ತೆರವುಗೊಳಿಸಿದ 90,000 ಕೋಟಿ ರೂ. ಸಾಲಗಳು, 1 ಹೆಕ್ಟೇರ್‌ಗಿಂತ ಕಡಿಮೆ ಭೂಮಿಯನ್ನು ಹೊಂದಿರುವ ರೈತರ ಸಂಖ್ಯೆ ಶೇಕಡ 51 ರಿಂದ 68 ಕ್ಕೆ ಏರಿದೆ ಎಂದು ಹೇಳಿದರು.

Video Top Stories