ಎಪಿಎಂಸಿ ಕಾಯ್ದೆ, ಭೂ ಸುಧಾರಣಾ ಕಾಯ್ದೆ ಸಾಧಕ ಬಾಧಕಗಳೇನು? ಯಾಕೀ ವಿರೋಧ?
ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬೆಂಗಳೂರು (ಸೆ. 29): ಕೃಷಿಕರ ತೀವ್ರ ವಿರೋಧ ಲೆಕ್ಕಿಸದೆ, ಚರ್ಚೆಗೂ ಆಸ್ಪದ ನೀಡದೆ ಕೃಷಿ ಮಸೂದೆ, ಭೂ ಸುಧಾರಣೆ ಮತ್ತು ಎಪಿಎಂಸಿ ತಿದ್ದುಪಡಿ ಮಸೂದೆಗಳನ್ನು ಜಾರಿಗೊಳಿಸುತ್ತಿರುವುದರ ವಿರುದ್ಧ ರೈತ, ಕಾರ್ಮಿಕ, ದಲಿತ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ರಾಜ್ಯಾದ್ಯಂತ ಭಾರಿ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಕೃಷಿ ಕಾಯ್ದೆಯ ನಿಜವಾದ ಪರಿಣಾಮಗಳೇನು? ಬಿಚ್ಚಿಟ್ಟ ಕಿಶೋರ್!
ಸರ್ಕಾರ ತರಲು ಹೊರಟಿರುವ ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೃಷಿ ಮಸೂದೆ ರೈತರಿಗೆ ಅನುಕೂಲವಾಗುವ ಬದಲು ಮರಣ ಶಾಸನವಾಗುತ್ತದೆ ಎಂಬುದು ಬಹುತೇಕರ ಅಭಿಪ್ರಾಯ. ಈ ಕಾಯ್ದೆ ಜಾರಿಗೆ ಬಂದರೆ ರೈತರ ಬದುಕು ಮೂರಾಬಟ್ಟೆಯಾಗುತ್ತದೆ ಎಂಬ ಆಕ್ರೋಶ ವ್ಯಕ್ತವಾಗುತ್ತಿದೆ. ರೈತರು ಇಷ್ಟು ಹೋರಾಟ ಮಾಡುತ್ತಿದ್ದರೂ ಮೋದಿ ಸಾಹೇಬ್ರು ಇದನ್ನು ಯಾಕೆ ತರಲು ಹೊರಟಿದ್ದಾರೆ? ಈ ಕಾಯ್ದೆಯ ಸಾಧಕ ಬಾಧಕಗಳೇನು? ನೋಡೋಣ ಬನ್ನಿ..!