
ಏಷ್ಯಾನೆಟ್‌ನ್ಯೂಸ್ ಮೇಲೆ ದಾಳಿ ಖಂಡಿಸಿ ಪ್ರತಿಭಟನೆ
ಏಷ್ಯಾನೆಟ್ ನ್ಯೂಸ್‌ನ ಕೊಚ್ಚಿ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ಶನಿವಾರ ಪ್ರತಿಭಟನೆ ನಡೆಸಲಾಗಿದೆ.
ಕೊಚ್ಚಿ (ಮಾ.4): ಏಷ್ಯಾನೆಟ್ ನ್ಯೂಸ್ ಕಚೇರಿಗೆ ನುಗ್ಗಿ ದಾಂಧಲೆ ಮಾಡಿದ್ದ ಎಸ್‌ಎಫ್‌ಐ ಕಾರ್ಯಕರ್ತರ ವರ್ತನೆಯನ್ನು ಖಂಡಿಸಿ ವಿವಿಧ ಮಾಧ್ಯಮ ಸಂಸ್ಥೆಗಳು ಹಾಗೂ ಮಾಧ್ಯಮ ಸಂಘಟನೆಗಳು ಪ್ರತಿಭಟನೆ ನಡೆಸಿವೆ.
ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ (ಪಿಸಿಐ), ಕೇರಳ ಯೂನಿಯನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ (ಕೆಯುಡಬ್ಲ್ಯುಜೆ), ತಿರುವನಂತಪುರಂ ಪ್ರೆಸ್ ಕ್ಲಬ್, ಹಿರಿಯ ಪತ್ರಕರ್ತರು, ಹಿರಿಯ ರಾಜಕಾರಣಿಗಳು, ವಿರೋಧ ಪಕ್ಷದ ನಾಯಕ ವಿ.ಡಿ.ಸತೀಶನ್ ಘಟನೆಯನ್ನು ಖಂಡಿಸಿದ್ದಾರೆ.
From the India Gate: ಕಾಂಗ್ರೆಸ್ ಒಗ್ಗಟ್ಟಿನ ಮಂತ್ರದ ವಾಸ್ತವ ಹೀಗಿದೆ; ‘ಭಜರಂಗಿ’ಗೆ ನೋಟಿಸ್ ಕಳಿಸಿದ ಸರ್ಕಾರ..!
ಇದು ಅತ್ಯಂತ ಹೇಯ ಕೃತ್ಯ ಎಂದು ಹಿರಿಯ ಪತ್ರಕರ್ತ ಬಿ.ಆರ್.ಪಿ. ಭಾಸ್ಕರ್ ಹೇಳಿದ್ದಾರೆ. ಘಟನೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಿಸಿಐ, ಪತ್ರಕರ್ತರನ್ನು ಬೆದರಿಸುವ ಪ್ರಯತ್ನಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತೋಳುಗಳನ್ನು ಏರಿಸಿ ಹಲ್ಲೆ ಮಾಡುವ ತಂತ್ರಗಳಿಗೆ ಯಾವುದೇ ಸ್ಥಾನವಿಲ್ಲ ಎಂದು ಹೇಳಿದೆ. ಈ ನಡುವೆ ರಾಜ್ಯ ಸರ್ಕಾರ ಕೂಡ ಈ ಘಟನೆಯ ಕುರಿತು ತ್ವರಿತ ತನಿಖೆ ಮಾಡಬೇಕು ಎಂದು ಆಗ್ರಹಿಸಿದೆ.