ಅಮೃತ್ ಪಾಲ್ ಬಂಧನಕ್ಕೆ ಶೋಧ, ಕಣ್ಮರೆಯಾಗಿ ಕೂತವನು ಅಡಗಿದ್ದಾದ್ರೂ ಎಲ್ಲಿ..?

ಖಲಿಸ್ತಾನಿ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ ಸತತ 3-4 ದಿನಗಳಿಂದ ನಾಪತ್ತೆಯಾಗಿದ್ದು, ಆತನ ಬಂಧನಕ್ಕೆ ಕಾರ್ಯಾಚರಣೆ ಇನ್ನಷ್ಟು ತೀವ್ರಗೊಂಡಿದೆ. 
 

Share this Video
  • FB
  • Linkdin
  • Whatsapp

ಖಲಿಸ್ತಾನಿ ಪ್ರತ್ಯೇಕ ರಾಷ್ಟ್ರ ಹೋರಾಟಗಾರ ಅಮೃತ್‌ಪಾಲ್ ಸಿಂಗ್ ಪರಾರಿಯಾಗಿದ್ದು ಆತನನ್ನು ಬಂಧಿಸಲು ಪಂಜಾಬ್‌ ಪೊಲೀಸರು ಬಲೆ ಬೀಸಿದ್ದಾರೆ.ಪಂಜಾಬ್‌ನಲ್ಲಿ ತನ್ನದೇ ಸಶಸ್ತ್ರ ಗುಂಪುಗಳನ್ನು ಕಟ್ಟಿಕೊಂಡು ತಿರುಗಾಡುತ್ತಿದ್ದ ಈತ ‘ವಾರಿಸ್ ಪಂಜಾಬ್ ದಿ’ ಹೆಸರಿನ ಧಾರ್ಮಿಕ ಸಂಘಟನೆ ನಡೆಸುತ್ತಿದ್ದ. ಇತ್ತೀಚೆಗೆ ಅಮೃತ್‌ಪಾಲ್ ಸಿಂಗ್ ಸಹಚರನನ್ನು ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ಅಮೃತಸರದ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿ ಆತನ ಶಸ್ತ್ರಧಾರಿ ಬೆಂಬಲಿಗರು ದಾಂಧಲೆ ನಡೆಸಿದ್ದ.

Related Video