Asianet Suvarna News Asianet Suvarna News

Russia-Ukraine Crisis: ಶೀಘ್ರವೇ ಇನ್ನೂ 13000 ಭಾರತೀಯರ ರಕ್ಷಣೆ: ಕೇಂದ್ರ

ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ದೇಶದ ಪಕ್ಕದಲ್ಲಿರುವ ರೊಮೇನಿಯಾ ಹಾಗೂ ಹಂಗೇರಿಗೆ ಭಾರತೀಯರನ್ನು ಸ್ಥಳಾಂತರಿಸಿ ಅಲ್ಲಿಂದ ಏರ್‌ಲಿಫ್ಟ್‌ ಮಾಡಲಾಗುತ್ತಿದೆ. ಸುಮಾರು 13 ಸಾವಿರ ಭಾರತೀಯರು ಉಕ್ರೇನ್‌ನಲ್ಲಿ ಉಳಿದಿದ್ದು, ಅವರನ್ನು ಕರೆತರುವ ಯತ್ನಗಳು ಮುಂದುವರಿದಿದೆ. 

First Published Feb 28, 2022, 10:20 AM IST | Last Updated Feb 28, 2022, 10:20 AM IST

ಯುದ್ಧಪೀಡಿತ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆಗೆ ‘ಆಪರೇಷನ್‌ ಗಂಗಾ’ ಹೆಸರಿನಲ್ಲಿ ಕಾರ್ಯಾಚರಣೆ ಆರಂಭಿಸಿರುವ ಕೇಂದ್ರ ಸರ್ಕಾರ, ಭಾನುವಾರ ಒಂದೇ ದಿನ ಮೂರು ವಿಶೇಷ ವಿಮಾನಗಳಲ್ಲಿ 688 ಮಂದಿಯನ್ನು ತವರಿಗೆ ಕರೆತಂದಿದೆ. ಇದರೊಂದಿಗೆ ಎರಡು ದಿನಗಳಲ್ಲಿ ಉಕ್ರೇನ್‌ನಿಂದ ಭಾರತಕ್ಕೆ ಮರಳಿದವರ ಸಂಖ್ಯೆ 907ಕ್ಕೇರಿಕೆಯಾಗಿದೆ.

ಉಕ್ರೇನ್‌ನಲ್ಲಿ ಯುದ್ಧ ನಡೆಯುತ್ತಿರುವ ಹಿನ್ನೆಲೆಯಲ್ಲಿ ಆ ದೇಶದ ಪಕ್ಕದಲ್ಲಿರುವ ರೊಮೇನಿಯಾ ಹಾಗೂ ಹಂಗೇರಿಗೆ ಭಾರತೀಯರನ್ನು ಸ್ಥಳಾಂತರಿಸಿ ಅಲ್ಲಿಂದ ಏರ್‌ಲಿಫ್ಟ್‌ ಮಾಡಲಾಗುತ್ತಿದೆ. ಸುಮಾರು 13 ಸಾವಿರ ಭಾರತೀಯರು ಉಕ್ರೇನ್‌ನಲ್ಲಿ ಉಳಿದಿದ್ದು, ಅವರನ್ನು ಕರೆತರುವ ಯತ್ನಗಳು ಮುಂದುವರಿದಿದೆ. ಉಕ್ರೇನ್‌ನಲ್ಲಿ ಸಿಲುಕಿರುವವರ ರಕ್ಷಣೆಗೆ ಕೇಂದ್ರ ಸರ್ಕಾರ ನಡೆಸುತ್ತಿರುವ ಅಪರೇಷನ್‌ ಗಂಗಾ ಏರ್‌ಲಿಫ್ಟ್‌ನಲ್ಲಿ ಕರ್ನಾಟಕ ಮೂಲದ 31 ವಿದ್ಯಾರ್ಥಿಗಳು ತವರಿಗೆ ಮರಳಿದ್ದಾರೆ.