ತಮಿಳುನಾಡಿನಲ್ಲಿ ಮುಂದುವರಿದ ಸನಾತನ ಸಂಘರ್ಷ, ಮಗನಿಗೆ ಕ್ಲಿನ್‌ಚಿಟ್‌ ನೀಡಿದ ಸ್ಟ್ಯಾಲಿನ್‌

ಸನಾತನ ಧರ್ಮ ಸಂಘರ್ಷ ತಮಿಳುನಾಡಿನಲ್ಲಿ ಮುಂದುವರಿದಿದೆ. ಹಿಂದೂ ಧರ್ಮದ ಬಗ್ಗೆ ಬಾಯಿಗೆ ಬಂದ ಹಾಗೆ ತಮಿಳುನಾಡಿನ ಡಿಎಂಕೆ ಪಕ್ಷದ ನಾಯಕರು ಮಾತನಾಡಿದ್ದಾರೆ.
 

Share this Video
  • FB
  • Linkdin
  • Whatsapp

ಬೆಂಗಳೂರು (ಸೆ.7): ತಮಿಳುನಾಡಿನಲ್ಲಿ ಸನಾತನ ಧರ್ಮ ಸಂಘರ್ಷ ಮುಂದುವರಿದಿದೆ. ಸಿಎಂ ಎಂಕೆ ಸ್ಟ್ಯಾಲಿನ್‌ ಪುತ್ರ ಉದಯನಿಧಿ ಸ್ಟ್ಯಾಲಿನ್‌ ಸನಾತನ ಧರ್ಮವನ್ನು ಡೆಂಘೆ, ಮಲೇರಿಯಾಗೆ ಹೋಲಿಸಿದರೆ, ಡಿಎಂಕೆ ಸಂಸದ ಎ.ರಾಜಾ, ಸನಾತನ ಧರ್ಮವನ್ನು ಏಡ್ಸ್‌ ಹಾಗೂ ಕುಷ್ಠರೋಗಕ್ಕೆ ಹೋಲಿಕೆ ಮಾಡಿದ್ದಾರೆ.

ಸನಾತನ ಧರ್ಮವನ್ನು ನಿರ್ಮೂಲನೆ ಮಾಡಬೇಕು ಎನ್ನುವ ಹೇಳಿಕೆಯನ್ನು ತಮಿಳುನಾಡು ಸಚಿವ ಉದಯನಿಧಿ ಸ್ಟ್ಯಾಲಿನ್‌ ಈಗಲೂ ಸಮರ್ಥಿಸಿಕೊಂಡಿದ್ದಾರೆ. ತಮ್ಮ ನಾಲ್ಕು ಪುಟಗಳ ಪತ್ರದಲ್ಲಿ ದೇಶದ ಗಮನವನ್ನು ಬೇರೆಡೆ ಸೆಳೆಯುವ ಉದ್ದೇಶವನ್ನು ಬಿಜೆಪಿ ಹೊಂದಿದೆ ಎಂದು ಟೀಕಿಸಿದ್ದಾರೆ.

ಲಂಡನ್‌ ಕಾಲೇಜಿನಿಂದ ಅರ್ಥಶಾಸ್ತ್ರದ ಪದವಿ ಪಡೆದ ಪುತ್ರಿ, ಹೆಮ್ಮೆಯಿಂದ ಬೀಗಿದ ಟೀಮ್‌ ಇಂಡಿಯಾ ಮಾಜಿ ನಾಯಕ!

ಉದಯನಿಧಿ ಸ್ಟ್ಯಾಲಿನ್‌ ಹೇಳಿರುವ ಸನಾತನ ಧರ್ಮ ನಿರ್ಮೂಲನೆ ಹೇಳಿಕೆಗೆ ಇದೇ ಮೊದಲ ಬಾರಿಗೆ ಅವರ ತಂದೆ ಹಾಗೂ ತಮಿಳುನಾಡು ಸಿಎಂ ಎಂಕೆ ಸ್ಟ್ಯಾಲಿನ್‌ ಮಾತನಾಡಿದ್ದಾರೆ. ಅಮಾನವೀಯ ತತ್ವಗಳ ಬಗ್ಗೆ ಮಾತ್ರವೇ ಉದಯನಿಧಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದ್ದಾರೆ.

Related Video