Vaccine Politics: ಲಸಿಕೆ ಅಭಿಯಾನಕ್ಕೆ ಹಿನ್ನಡೆಯಾಗಲು ವಿಪಕ್ಷಗಳೇ ಕಾರಣ: ಸಂಸತ್‌ನಲ್ಲಿ ತೇಜಸ್ವಿ ಗುಡುಗು!

ಚಳಿಗಾಲದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ವಿರುದ್ಧ ಬಿಜೆಪಿ ಸಂಸದ ಹರಿಹಾಯ್ದಿದ್ದಾರೆ. ಸಂಸತ್‌ನ ಪ್ರಶ್ನೋತ್ತರ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ ದೇಶದಲ್ಲಿ ಕೊರೋನಾ ವ್ಯಾಕ್ಸಿನ್ ಅಭಿಯಾನಕ್ಕೆ ಹಿನ್ನಡೆಯಾಗಲು ವಿಪಕ್ಷಗಳೇ ಕಾರಣ. ದೇಶದಲ್ಲಿ ಲಸಿಕೆಯ ಬಗ್ಗೆ ಎಲ್ಲಾ ವಿಪಕ್ಷಗಳು ಅಪಪ್ರಚಾರ ಮಾಡಿದ ಕಾರಣ ನಾವು ಶೇಕಡಾ ನೂರರಷ್ಟು ಲಸಿಕೆ ವಿತರಣೆ ಸಾಧನೆ ತಲುಪಲಾಗಲಿಲ್ಲ ಎಂದು ಕಿಡಿ ಕಾರಿದ್ದಾರೆ.

Share this Video
  • FB
  • Linkdin
  • Whatsapp

ನವದೆಹಲಿ(ಡಿ.03) ಚಳಿಗಾಲದ ಸಂಸತ್ ಅಧಿವೇಶನದಲ್ಲಿ ವಿಪಕ್ಷಗಳ ವಿರುದ್ಧ ಬಿಜೆಪಿ ಸಂಸದ ಹರಿಹಾಯ್ದಿದ್ದಾರೆ. ಸಂಸತ್‌ನ ಪ್ರಶ್ನೋತ್ತರ ವೇಳೆ ಮಾತನಾಡಿದ ತೇಜಸ್ವಿ ಸೂರ್ಯ ದೇಶದಲ್ಲಿ ಕೊರೋನಾ ವ್ಯಾಕ್ಸಿನ್ ಅಭಿಯಾನಕ್ಕೆ ಹಿನ್ನಡೆಯಾಗಲು ವಿಪಕ್ಷಗಳೇ ಕಾರಣ. ದೇಶದಲ್ಲಿ ಲಸಿಕೆಯ ಬಗ್ಗೆ ಎಲ್ಲಾ ವಿಪಕ್ಷಗಳು ಅಪಪ್ರಚಾರ ಮಾಡಿದ ಕಾರಣ ನಾವು ಶೇಕಡಾ ನೂರರಷ್ಟು ಲಸಿಕೆ ವಿತರಣೆ ಸಾಧನೆ ತಲುಪಲಾಗಲಿಲ್ಲ ಎಂದು ಕಿಡಿ ಕಾರಿದ್ದಾರೆ.

ಇದೇ ವೇಳೆ ಕಾಂಗ್ರೆಸ್‌ ಪಕ್ಷ ಲಸಿಕೆ ವಿಚಾರವಾಗಿ ತಪ್ಪು ಮಾಹಿತಿಗಳನ್ನು ಹರಡಿದೆ ಎಂದೂ ಉಲ್ಲೇಖಿಸಿದ ತೇಜಸ್ವಿ ಸೂರ್ಯ, ರಾಹುಲ್ ಗಾಂಧಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ. ಇನ್ನು ತೇಢಜಸ್ವಿ ಮಾತಿಗೆ ವಿಪಕ್ಷಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಈ ವೇಳೆ ಉತ್ತರಿಸಿದ ತೇಜಸ್ವಿ ಸೂರ್ಯ ನೀವು ಆರೋಪ ಮಾಡಿದ್ದೀರ ಹೀಗಾಗಿ ಅದೆಲ್ಲಕ್ಕೂ ಉತ್ತರ ಕೇಳುವ ತಾಳ್ಮೆ ಇಟ್ಟುಕೊಳ್ಳಿ ಎಂದಿದ್ದಾರೆ. 

Related Video