Asianet Suvarna News Asianet Suvarna News

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತ: ಸುಪ್ರೀಂ ಕದ ತಟ್ಟಿದ ಶಿವಸೇನೆ!

ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ನಿರ್ಣಯ ಖಂಡಿಸಿ ಶಿವೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಮುಂಬೈ(ನ.12): ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದ್ದು, ರಾಜ್ಯಪಾಲರ ಮನವಿಯನ್ನು ಕೇಂದ್ರ ಸಂಪುಟ ಒಪ್ಪಿಕೊಂಡಿದೆ. ಅಲ್ಲದೇ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಕೂಡ ಶಿಫಾರಸ್ಸಿಗೆ ಅಂಕಿತ ಹಾಕಿದ್ದಾರೆ. ಈ ಮಧ್ಯೆ ರಾಜ್ಯಪಾಲರ ನಿರ್ಣಯ ಖಂಡಿಸಿ ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ರಾಜ್ಯಪಾಲರ ನಿರ್ಣಯ ಅಸಾಂವಿಧಾನಿಕವಾಗಿದ್ದು, ಕೂಡಲೇ ಶಿಫಾರಸ್ಸಿಗೆ ತಡೆ ನೀಡಬೇಕು ಎಂದು ಕೋರಿ ಶಿವಸೇನೆ ಸುಪ್ರೀಂಕೋರ್ಟ್'ನಲ್ಲಿ ಅರ್ಜಿ ಸಲ್ಲಿಸಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories