ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್‌ ಚೌಹಾಣ್'ಗೂ ಕೊರೋನಾ ಪಾಸಿಟಿವ್!

ಮಧ್ಯಪ್ರದೇಶ ಸಿಎಂ ಶಿವರಾಜ್‌ ಸಿಂಗ್ ಚೌಹಾನ್‌ಗೂ ಕೊರೋನಾ| ಅಧಿಕೃತ ಟ್ವಿಟ್ ಖಾತೆಯಲ್ಲಿ ಟ್ವೀಟ್ ಮಾಡಿ ಮಾಹಿತಿ ಕೊಟ್ಟ ಸಿಎಂ| ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ

Share this Video
  • FB
  • Linkdin
  • Whatsapp

ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಲ್ಲಿ ಕೊರೋನಾ ವೈರಸ್ ದೃಢಪಟ್ಟಿದೆ. ಸ್ವತಃ ಶಿವರಾಜ್ ಸಿಂಗ್ ಚೌಹಾಣ್ ಅವರೇ ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದಾರೆ. 

ಕೆಲ ದಿನಗಳಿಂದ ನನಗೆ ಕೊರೋನಾ ಲಕ್ಷಣಗಳು ಕಂಡು ಬಂದಿತ್ತು. ಹೀಗಾಗಿ ಪರೀಕ್ಷೆಗೊಳಗಾಗಿದ್ದೆ. ಇದೀಗ ವೈದ್ಯಕೀಯ ವರದಿ ಬಂದಿದ್ದು, ಕೊರೋನಾ ವೈರಸ್ ಇರುವುದು ದೃಢಪಟ್ಟಿದೆ. ನನ್ನೊಂದಿಗೆ ಸಂಪರ್ಕದಲ್ಲಿದ್ದವರು ಕೂಡಲೇ ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳಿ. ಹಾಗೂ ನಿಕಟ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರಂಟೈನ್'ಗೆ ಒಳಗಾಗುವಂತೆ ಈ ಮೂಲಕ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

ಇಷ್ಟೇ ಅಲ್ಲದೇ ಕೋವಿಡ್ 19 ಮಾರ್ಗಸೂಚಿಗಳನ್ನು ನಾನು ಅನುಸರಿಸುತ್ತಿದ್ದೇನೆ. ವೈದ್ಯರ ಸಲಹೆಯಂತೆ ಕ್ವಾರಂಟೈನ್'ಗೊಳಗಾಗಿದ್ದೇನೆ. ರಾಜ್ಯದ ಕೊರೋನಾ ಪರಿಸ್ಥಿತಿ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ಸಭೆ ನಡೆಸುತ್ತೇನೆಂದಿದ್ದಾರೆ. 

Related Video