ಆಸ್ಕರ್‌ ಫೆರ್ನಾಂಡಿಸ್‌ ನಿಧನಕ್ಕೆ ಸೋನಿಯಾ ಸಂತಾಪ, ಕಣ್ಣೀರಾದ ಪತ್ನಿ ಬ್ಲಾಸಂ!

ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. 

Share this Video
  • FB
  • Linkdin
  • Whatsapp

ಮಂಗಳೂರು(ಸೆ.13) ರಾಷ್ಟ್ರ ರಾಜಕಾರಣದಲ್ಲಿ ಹೆಸರು ಮಾಡಿದ್ದ ಉಡುಪಿಯ ಮಾಜಿ ಕೇಂದ್ರ ಸಚಿವ ಆಸ್ಕರ್ ಫೆರ್ನಾಂಡಿಸ್ ನಿಧನರಾಗಿದ್ದಾರೆ. ಅವರ ಅಗಲುವಿಕೆಗೆ ಕಾಂಗ್ರೆಸ್‌ ನಾಯಕರು ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಇನ್ನು ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಕೂಡಾ ಆಸ್ಕರ್ ಫೆರ್ನಾಂಡಿಸ್‌ ಅವರ ಪತ್ನಿಗೆ ಕರೆ ಮಾಡಿ ಸಂತಾಪ ಸೂಚಿಸಿದ್ದಾರೆ. 

ಹೌದು ಆಸ್ಕರ್‌ ಅವರ ಪತ್ನಿ ಬ್ಲಾಸಂರವರಿಗೆ ಕರೆ ಮಾಡಿದ ಸೋನಿಯಾ ಗಾಂಧಿ ಸಾಂತ್ವನ ಹೇಳಿದ್ದಾರೆ. ಈ ವೇಳೆ ಗಂಡನನ್ನು ಕಳೆದುಕೊಂಡ ನೋವಿನಲ್ಲಿರುವ ಬ್ಲಾಸಂ ಕಣ್ಣೀರಿಟ್ಟಿದ್ದಾರೆ. ಸೋನಿಯಾ ಹಾಗೂ ರಾಹುಲ್‌ ಗಾಂಧಿಗೆ ಆಪ್ತರಾಗಿದ್ದ ಆಸ್ಕರ್‌ ಫೆರ್ನಾಂಡಿಸ್ ಇಂಧಿರಾ ಗಾಂಧಿಯವರ ನಂಬಿಕಸ್ಥ ನಾಯಕರಾಗಿ ಗುರುತಿಸಿಕೊಂಡಿದ್ದರು. 

Related Video