Asianet Suvarna News Asianet Suvarna News

ತಿಹಾರ್‌ಗೆ ಸೋನಿಯಾ; ಡಿಕೆಶಿ ಭೇಟಿಯಾದ ಕಾಂಗ್ರೆಸ್ ನಾಯಕಿ

ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದರು. ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಕೂಡಾ ಡಿಕೆಶಿಯವರನ್ನು ಭೇಟಿಯಾಗಿದ್ದರು.

ನವದೆಹಲಿ (ಅ.23): ಅಕ್ರಮ ಹಣ ವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತಿಹಾರ್ ಜೈಲಿನಲ್ಲಿರುವ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಭೇಟಿಯಾದರು. 

ಕೆಲವು ದಿನಗಳ ಹಿಂದಷ್ಟೇ ಕರ್ನಾಟಕ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕೂಡಾ ಡಿಕೆಶಿಯವರನ್ನು ಭೇಟಿಯಾಗಿ ಬೆಂಬಲ ಸೂಚಿಸಿದ್ದರು.

ಅಕ್ರಮ ಹಣ ವ್ಯವಹಾರ ನಡೆಸಿರುವ ಆರೋಪ ಎದುರಿಸುತ್ತಿರುವ ಡಿಕೆಶಿ, ವಿಚಾರಣೆಗೆ ಸಹಕರಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದಾರೆ.   

 

Video Top Stories