Sonia Gandhi: ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾ ಗಾಂಧಿ ? ಚುನಾವಣೆಗೆ ಕಣಕ್ಕಿಳಿಸಲು ಸಭೆಯಲ್ಲಿ ನಿರ್ಧಾರ..?
ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರಾ ಸೋನಿಯಾಗಾಂಧಿ
ಲೋಕಸಭೆ ಬದಲು ರಾರ್ಜಸಭೆಗೆ ಸ್ಪರ್ಧೆ ನಡೆಸ್ತಾರಾ
ರಾಯ್ ಬರೇಲಿಯಿಂದ ದೂರ ಸೋನಿಯಾ ದೂರ?
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ(Sonia Gandhi) ರಾಜ್ಯಸಭೆಗೆ ಸ್ಪರ್ಧೆ ಮಾಡ್ತಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ಲೋಕಸಭೆ ಬದಲು ರಾಜ್ಯಸಭೆಗೆ(Rajya Sabha) ಸ್ಪರ್ಧೆ ಮಾಡ್ತಾರೆ ಎಂದು ಹೇಳಲಾಗುತ್ತಿದೆ. ಅಲ್ಲದೇ ರಾಯ್ ಬರೇಲಿಯಿಂದ ದೂರ ಸರೀಯಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜಸ್ಥಾನದಿಂದ(Rajasthan) ಸೋನಿಯಾ ಗಾಂಧಿ ರಾಜ್ಯಸಭೆ ಕಣಕ್ಕಿಳಿಯುವ ಸಾಧ್ಯತೆ ಇದೆಯಂತೆ. ಹಿಮಾಚಲ ಪ್ರದೇಶದಿಂದಲೂ(Himachal Pradesh) ಸ್ಫರ್ಧಿಸುವಂತೆ ಒತ್ತಾಯ ಕೇಳಿಬರುತ್ತಿದೆ . ಯಾವುದಾದರೂ ಒಂದು ರಾಜ್ಯದಿಂದ ಸ್ಪರ್ಧೆ ಎಂದು ಮೂಲಗಳು ಹೇಳುತ್ತಿವೆ. ಈ ಸಂಬಂಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಲಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕರ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇನ್ನೂ ರಾಯ್ ಬರೇಲಿಯಿಂದ ಪ್ರಿಯಾಂಕಾ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗ್ತಿದೆ. ಸೋನಿಯಾ ಗಾಂಧಿ ಪ್ರತಿನಿಧಿಸುತ್ತಿರುವ ಕ್ಷೇತ್ರಕ್ಕೆ ಮಗಳು ಸ್ಪರ್ಧಿಸುತ್ತಿದ್ದು, ಉತ್ತರಪ್ರದೇಶದ ರಾಯ್ ಬರೇಲಿಯಿಂದ ಪ್ರಿಯಾಂಕಾ ಸ್ಪರ್ಧಿಸುವ ಸಾಧ್ಯತೆ ಇದೆ.
ಇದನ್ನೂ ವೀಕ್ಷಿಸಿ: ಲೋಕಸಭೆ ಚುನಾವಣೆ ಹೊತ್ತಲ್ಲಿ ಕಾಂಗ್ರೆಸ್‌ಗೆ ಬಿಗ್ ಶಾಕ್..! 'ಮಹಾ'ದಲ್ಲಿ 'ಕೈ' ತೊರೆದ ಮತ್ತೊಬ್ಬ ಹಿರಿಯ ನಾಯಕ !