Asianet Suvarna News Asianet Suvarna News

ಪಟಾಕಿ ಕಾರ್ಖಾನೆಗೆ ಬೆಂಕಿ, ಮೂವರು ಮಹಿಳೆ ಸೇರಿ 8 ಮಂದಿ ಸುಟ್ಟು ಕರಕಲು!

ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸರೋಜ್ ಕುಮಾರ್ ಠಾಕೂರ್ ತಿಳಿಸಿದ್ದಾರೆ.

ಕೃಷ್ಣಗಿರಿ (ಜು.29): ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್, ಮೃತರ ಕುಟುಂಬ ಮತ್ತು ಗಾಯಾಳುಗಳಿಗೆ ಪರಿಹಾರ ಘೋಷಿಸಿದ್ದಾರೆ.

ಜಿಲ್ಲೆಯ ಪಜಯಪೆಟ್ಟೈನಲ್ಲಿರುವ ಪಟಾಕಿ ತಯಾರಿಕಾ ಗೋದಾಮಿನಲ್ಲಿ ಸಂಭವಿಸಿದ ಹಠಾತ್ ಸ್ಫೋಟದಲ್ಲಿ ಹಲವರು ಗಾಯಗೊಂಡಿದ್ದಾರೆ. ಸ್ಫೋಟದ ಪ್ರಭಾವದಿಂದ ಕಾರ್ಖಾನೆಯ ಸಮೀಪವಿರುವ ಮನೆಗಳು ಮತ್ತು ಕೆಲವು ಅಂಗಡಿಗಳು ಹಾನಿಗೊಳಗಾಗಿವೆ ಎಂದು ಅವರು ಹೇಳಿದರು. 

Bengaluru: ತಾಯಿ ಜೊತೆ ಅಫೇರ್‌, ಬಾಣಸಿಗನ ಹತ್ಯೆ ಮಾಡಿದ ಪುತ್ರ!

ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸಂತ್ರಸ್ತರನ್ನು ರಕ್ಷಿಸಿದ್ದಾರೆ.

Video Top Stories