Asianet Suvarna News Asianet Suvarna News

5 States Elections: ಉತ್ತರಪ್ರದೇಶದಲ್ಲಿ ಯೋಗಿ ಗೆದ್ದರೆ ದಾಖಲೆ, ಮೋದಿಗೆ ಬಲ

ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್‌, ಮಣಿಪುರ (5 States Elections) ಚುನಾವಣೆ ಘೋಷಣೆಯಾಗಿವೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ಮಿಕ್ಕೆಲ್ಲ ಕಡೆ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ ಈ ಚುನಾವಣಾ ಸಮರ ಬಿಜೆಪಿಗೆ (BJP) ಸತ್ವಪರೀಕ್ಷೆ ಆಗುವುದರಲ್ಲಿ ಸಂದೇಹವೇ ಇಲ್ಲ. 

ನವದೆಹಲಿ (ಜ. 11): ಉತ್ತರ ಪ್ರದೇಶ, ಉತ್ತರಾಖಂಡ, ಗೋವಾ, ಪಂಜಾಬ್‌, ಮಣಿಪುರ (5 States Elections) ಚುನಾವಣೆ ಘೋಷಣೆಯಾಗಿವೆ. ಪಂಜಾಬ್‌ನಲ್ಲಿ ಕಾಂಗ್ರೆಸ್‌ ಅಧಿಕಾರದಲ್ಲಿದ್ದು, ಮಿಕ್ಕೆಲ್ಲ ಕಡೆ ಬಿಜೆಪಿ ಅಧಿಕಾರದಲ್ಲಿದೆ. ಹೀಗಾಗಿ ಈ ಚುನಾವಣಾ ಸಮರ ಬಿಜೆಪಿಗೆ (BJP) ಸತ್ವಪರೀಕ್ಷೆ ಆಗುವುದರಲ್ಲಿ ಸಂದೇಹವೇ ಇಲ್ಲ. ಫೆ.10 ರಿಂದ ಮಾ.7ರ ಅವಧಿಯಲ್ಲಿ ಹಲವು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಮಾ.10 ರಂದು ಈ ಎಲ್ಲಾ 5 ರಾಜ್ಯಗಳ ಫಲಿತಾಂಶ ಪ್ರಕಟವಾಗಲಿದೆ.

Assembly Elections 2022: ಉತ್ತರವನ್ನು ಗೆದ್ದು ಮತ್ತೆ ದೇಶ ಗೆಲ್ತಾರಾ ನರೇಂದ್ರ ಮೋದಿ?

ಉತ್ತರ ಪ್ರದೇಶದಲ್ಲಿ (Uttar Pradesh) ಒಮ್ಮೆ ಆಡಳಿತ ನಡೆಸಿದವರು ಪುನರಾಯ್ಕೆಯಾದ ನಿದರ್ಶನ ಮೂರೂವರೆ ದಶಕಗಳಲ್ಲಿ ಇಲ್ಲ. ಯೋಗಿ ಆದಿತ್ಯನಾಥ (Yogi Adithyanath) ನೇತೃತ್ವದಲ್ಲಿ ಬಿಜೆಪಿ ಮರು ಆಯ್ಕೆಯಾದರೆ ದಾಖಲೆ ನಿರ್ಮಾಣವಾಗುತ್ತದೆ. 2017 ರಲ್ಲಿ ಐತಿಹಾಸಿಕ 312 ಸ್ಥಾನ ಗೆದ್ದಿದ್ದ ಬಿಜೆಪಿ ಅಭಿವೃದ್ಧಿ ಹೆಸರಲ್ಲಿ ಮತ ಕೇಳುತ್ತಿದೆ. ಕಳೆದ ಬಾರಿ 47 ಸ್ಥಾನಕ್ಕೆ ಕುಸಿದಿದ್ದ ಸಮಾಜವಾದಿ ಪಕ್ಷ 15 ಸಣ್ಣಪುಟ್ಟಪಕ್ಷಗಳ ಜತೆ ಸೇರಿ ಪೈಪೋಟಿ ನೀಡುತ್ತಿದೆ. ಸಮೀಕ್ಷೆಗಳು ಬಿಜೆಪಿಗೇ ಬಹುಮತ ಎಂದು ಭವಿಷ್ಯ ನುಡಿಯುತ್ತಿವೆ. 

 

Video Top Stories