Asianet Suvarna News Asianet Suvarna News

ಉತ್ತರಾಖಂಡ ನೀರ್ಗಲ್ಲು ಸ್ಫೋಟ: ಸುರಂಗದಲ್ಲಿದ್ದು ಬದುಕಿ ಬಂದ ಶ್ರೀನಿವಾಸ ರೆಡ್ಡಿ ಮಾತು

ಉತ್ತರಾಖಂಡದಲ್ಲಿ ಫೆ.7ರಂದು ಸಂಭವಿಸಿದ ನೀರ್ಗಲ್ಲು ಸ್ಫೋಟ ಹಾಗೂ ಪ್ರವಾಹದಿಂದಾದ ದುರಂತದಲ್ಲಿ ನಾಪತ್ತೆಯಾದ 174 ಮಂದಿ, ಘಟನೆ ಸಂಭವಿಸಿದ 4 ದಿನದ ಬಳಿಕವೂ ಪತ್ತೆಯಾಗಿಲ್ಲ. 

ಬೆಂಗಳೂರು (ಫೆ. 11): ಉತ್ತರಾಖಂಡದಲ್ಲಿ ಫೆ.7ರಂದು ಸಂಭವಿಸಿದ ನೀರ್ಗಲ್ಲು ಸ್ಫೋಟ ಹಾಗೂ ಪ್ರವಾಹದಿಂದಾದ ದುರಂತದಲ್ಲಿ ನಾಪತ್ತೆಯಾದ 174 ಮಂದಿ, ಘಟನೆ ಸಂಭವಿಸಿದ 4 ದಿನದ ಬಳಿಕವೂ ಪತ್ತೆಯಾಗಿಲ್ಲ. ಅಲ್ಲದೆ, ತಪೋವನ ಎಂಬಲ್ಲಿ 1500 ಮೀಟರ್‌ ಉದ್ದದ ವಿದ್ಯುತ್‌ ಯೋಜನೆಯ ಸುರಂಗದೊಳಗೆ ಕೆಸರಿನಲ್ಲಿ ಸಿಲುಕಿರುವ ಸುಮಾರು 25-35 ಮಂದಿಯ ರಕ್ಷಣೆಯೂ ಸಾಧ್ಯವಾಗಿಲ್ಲ. 

'ಹಿಂದ' ದಿಂದ ಹಿಂದೆ ಸರಿದ ಸಿದ್ದರಾಮಯ್ಯ; ನಿನ್ನೆ ರಾತ್ರಿ ಬಂದ ಒಂದು ಕಾಲ್ ಕಾರಣ?

ನಾಪತ್ತೆಯಾಗಿರುವ ಜನರನ್ನು ಹುಡುಕಲು ಈಗ ಡ್ರೋನ್‌, ರಿಮೋಟ್‌ ಸೆನ್ಸಿಂಗ್‌, ಥರ್ಮಲ್‌ ಸ್ಕಾ್ಯನಿಂಗ್‌ ಉಪಕರಣ ಹಾಗೂ ಇನ್ನೂ ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸುರಂಗ ಮಾರ್ಗದಿಂದ ಬದುಕಿ ಬಂದ ಶ್ರೀನಿವಾಸ ರೆಡ್ಡಿಯವರು ಏಷ್ಯಾನೆಟ್ ಸುವರ್ಣ ನ್ಯೂಸ್ ಜೊತೆ ಅನುಭವ ಹಂಚಿಕೊಂಡಿದ್ದಾರೆ. 

 

Video Top Stories