News Hour: ಕೋರ್ಟ್ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ
ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ
ನವದೆಹಲಿ (ಮೇ. 14): ಉತ್ತರ ಪ್ರದೇಶದ ವಾರಾಣಸಿಯಲ್ಲಿನ ಗ್ಯಾನವಾಪಿ ಮಸೀದಿ-ಶೃಂಗಾರ ಗೌರಿ ದೇಗುಲದ ಸಮೀಕ್ಷೆ ನಡೆಸುವುದಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿತ್ತು. ಹೀಗಾಗಿ ಶನಿವಾರದಿಂದ ಕಾಶಿ ವಿಶ್ವನಾಥ ಮಂದಿರದ ಪಕ್ಕದಲ್ಲೇ ಇರುವ ಗ್ಯಾನವಾಪಿ ಮಸೀದಿ ವಿಡಿಯೋ ಸಮೀಕ್ಷೆಯನ್ನು ವಾರಾಣಸಿ ಕೋರ್ಟ್ ನೇಮಿತ ಮೂವರು ಕಮಿಷ್ನರ್‌ಗಳು ಆರಂಭಿಸಿದ್ದಾರೆ. ಕೋರ್ಟ್ ಆದೇಶದಂತೆ ಭದ್ರತೆ ನಡುವೆ ಜ್ಞಾನವ್ಯಾಪಿ ಮಸೀದಿ ಸಮೀಕ್ಷೆ ನಡೆದಿದೆ.
ಇದನ್ನೂ ಓದಿ: ಸಂವಿಧಾನ, ಕಾನೂನಿಗೆ ತಲೆಬಾಗಿದ ಮುಸ್ಲಿಂ ಸಮುದಾಯ: ಇನ್ಮುಂದೆ ಕೇಳಿಸಲ್ಲ ಆಜಾನ್ ಕೂಗು
ಕಾಶಿ ವಿಶ್ವನಾಥ ಮಂದಿರದ ಭಾಗವನ್ನು ಕೆಡವಿ ಅಂದಿನ ಮುಘಲ್ ದೊರೆ ಔರಂಗಜೇಬ್, ಗ್ಯಾನವಾಪಿ ಮಸೀದಿ ಕಟ್ಟಿಸಿದ್ದ. ಈ ಮಸೀದಿಯಲ್ಲಿ ಶೃಂಗಾರ ಗೌರಿ, ಗಣೇಶ ಸೇರಿ ಅನೇಕ ದೇವರ ವಿಗ್ರಹಗಳಿವೆ. ಅವುಗಳ ಪೂಜೆಗೆ ಅವಕಾಶ ನೀಡಬೇಕು ಎಂಬ ಅರ್ಜಿ ವಾರಾಣಸಿ ಕೋರ್ಟ್ ಮುಂದಿದೆ. ಈ ಹಿನ್ನೆಲೆಯಲ್ಲಿ ವಿಗ್ರಹಗಳ ಪತ್ತೆಗಾಗಿ ವಿಡಿಯೋ ಸಮೀಕ್ಷೆಗೆ ಕೋರ್ಚ್ ಆದೇಶಿಸಿತ್ತು.