ಧರ್ಮಶಾಲಾದಲ್ಲಿ ಮೇಘಸ್ಫೋಟ, ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾರುಗಳು!

ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ತಾಣಗಳಿರುವ ಘಟ್ಟ ಪ್ರದೇಶದ ರಾಜ್ಯವಾದ ಹಿಮಾಚಲಪ್ರದೇಶದಲ್ಲಿ  ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಧರ್ಮಶಾಲಾದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ನಿರ್ಮಾಣವಾಗಿದ್ದು, ನೀರಿನ ರಭಸಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿವೆ

Share this Video
  • FB
  • Linkdin
  • Whatsapp

ಧರ್ಮಶಾಲಾ(ಜು.12): ಉತ್ತರ ಭಾರತದಲ್ಲಿ ಮತ್ತೆ ಪ್ರವಾಹ ಉಂಟಾಗಿದ್ದು, ಅನೇಕ ಜಿಲ್ಲೆಗಳು ಸಂಪೂರ್ಣ ನೀರಿನಿಂದ ಆವೃತವಾಗಿವೆ. ಭಾರತದ ಪ್ರಮುಖ ಪ್ರವಾಸಿ ತಾಣಗಳಿರುವ ಘಟ್ಟ ಪ್ರದೇಶದ ರಾಜ್ಯವಾದ ಹಿಮಾಚಲಪ್ರದೇಶದಲ್ಲಿ ಕಳೆದ ವಾರದಿಂದ ಭಾರೀ ಮಳೆಯಾಗುತ್ತಿದೆ. ಈ ನಡುವೆ ಧರ್ಮಶಾಲಾದಲ್ಲಿ ಸಂಭವಿಸಿದ ಮೇಘಸ್ಫೋಟದಿಂದ ಪ್ರವಾಹ ನಿರ್ಮಾಣವಾಗಿದ್ದು, ನೀರಿನ ರಭಸಕ್ಕೆ ಮನೆಗಳು, ಕಾರು, ಸೇತುವೆಗಳು ಕೊಚ್ಚಿಹೋಗಿರುವ ವಿಡಿಯೋಗಳು ಭಾರೀ ವೈರಲ್ ಆಗಿವೆ.

ಮಹಾರಾಷ್ಟ್ರ, ಬೆಳಗಾವಿಯಲ್ಲಿ ಭಾರೀ ಮಳೆ, ತೀರ ಪ್ರದೇಶಗಳಲ್ಲಿ ಪ್ರವಾಹಾತಂಕ

ಹಿಮಾಚಲ ಪ್ರದೇಶ ರಾಜ್ಯದ ಧರ್ಮಶಾಲಾ ಬಳಿ ಇರುವ ಭಾಗ್ಸು ನಾಗ್ ಗ್ರಾಮದಲ್ಲಿ ಪ್ರವಾಹದಿಂದ ಹತ್ತಾರು ಕಾರುಗಳು ರಸ್ತೆಯಲ್ಲಿ ಕೊಚ್ಚಿಕೊಂಡು ಹೋಗುತ್ತಿರುವ ವಿಡಿಯೋಗಳು ವೈರಲ್ ಆಗಿವೆ. ಹಾಗೇ, ಶಿಮ್ಲಾದ ರಾಂಪುರ ಪ್ರದೇಶದ ಬಳಿ ಇರುವ ಝಕ್ರಿಯಲ್ಲಿ ರಾಷ್ಟ್ರೀಯ ಹೆದ್ದಾರಿ ಬಂದ್ ಆಗಿದೆ. ಹೈವೇಯಲ್ಲಿ ಕುಸಿದಿರುವ ಮಣ್ಣು, ಬಿದ್ದಿರುವ ಮರಗಳನ್ನು ತೆರವುಗೊಳಿಸಿ, ರಸ್ತೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತಿದೆ.

ಭಾರಿ ಮಳೆಗೆ ಉತ್ತರಖಂಡದಲ್ಲಿ ಪ್ರವಾಹ ಭೀತಿ: ಮುಳುಗಡೆಯಾದ ರಿಷಿಕೇಶ್!

ಎಎನ್​ಐ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದು, ಹಿಮಾಚಲಪ್ರದೇಶದ ಮಂಝಿ ನದಿ ಉಕ್ಕಿ ಹರಿಯುತ್ತಿದ್ದು, ನದಿ ತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲಾಗಿದೆ. ಇಂದು ಮಾತ್ರವಲ್ಲದೆ ನಾಳೆ ಕೂಡ ಹಿಮಾಚಲಪ್ರದೇಶದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Related Video