Asianet Suvarna News Asianet Suvarna News

5 States Elections: ಯುಪಿಯಲ್ಲಿ ಯೋಗಿ ನೇತೃತ್ವದಲ್ಲಿ ಬಿಜೆಪಿ ಮರು ಆಯ್ಕೆಯಾದರೆ ದಾಖಲೆ

ಉತ್ತರ ಪ್ರದೇಶದಲ್ಲಿ (Uttar Pradesh) ಒಮ್ಮೆ ಆಡಳಿತ ನಡೆಸಿದವರು ಪುನರಾಯ್ಕೆಯಾದ ನಿದರ್ಶನ ಮೂರೂವರೆ ದಶಕಗಳಲ್ಲಿ ಇಲ್ಲ. ಯೋಗಿ ಆದಿತ್ಯನಾಥ  (Yogi Adithyanath) ನೇತೃತ್ವದಲ್ಲಿ ಬಿಜೆಪಿ ಮರು ಆಯ್ಕೆಯಾದರೆ ದಾಖಲೆ ನಿರ್ಮಾಣವಾಗುತ್ತದೆ. 

ನವದೆಹಲಿ (ಜ. 22): ಉತ್ತರ ಪ್ರದೇಶದಲ್ಲಿ (Uttar Pradesh) ಒಮ್ಮೆ ಆಡಳಿತ ನಡೆಸಿದವರು ಪುನರಾಯ್ಕೆಯಾದ ನಿದರ್ಶನ ಮೂರೂವರೆ ದಶಕಗಳಲ್ಲಿ ಇಲ್ಲ. ಯೋಗಿ ಆದಿತ್ಯನಾಥ  (Yogi Adithyanath) ನೇತೃತ್ವದಲ್ಲಿ ಬಿಜೆಪಿ ಮರು ಆಯ್ಕೆಯಾದರೆ ದಾಖಲೆ ನಿರ್ಮಾಣವಾಗುತ್ತದೆ. 2017ರಲ್ಲಿ ಐತಿಹಾಸಿಕ 312 ಸ್ಥಾನ ಗೆದ್ದಿದ್ದ ಬಿಜೆಪಿ ಅಭಿವೃದ್ಧಿ ಹೆಸರಲ್ಲಿ ಮತ ಕೇಳುತ್ತಿದೆ. ಕಳೆದ ಬಾರಿ 47 ಸ್ಥಾನಕ್ಕೆ ಕುಸಿದಿದ್ದ ಸಮಾಜವಾದಿ ಪಕ್ಷ 15 ಸಣ್ಣಪುಟ್ಟಪಕ್ಷಗಳ ಜತೆ ಸೇರಿ ಪೈಪೋಟಿ ನೀಡುತ್ತಿದೆ.

5 States Elections: ಮೋದಿ- ಯೋಗಿಗೆ ಉತ್ತರ ಪ್ರದೇಶ ಗೆಲುವು ಅದೆಷ್ಟು ಮುಖ್ಯ.? 

ಸಮೀಕ್ಷೆಗಳು ಬಿಜೆಪಿಗೇ ಬಹುಮತ ಎಂದು ಭವಿಷ್ಯ ನುಡಿಯುತ್ತಿವೆ. ರೈತ ಹೋರಾಟ, ಕೋವಿಡ್‌ ನಿರ್ವಹಣೆ ಬಿಜೆಪಿಗೆ ಮುಳುವಾದರೆ, ಕುಟುಂಬ ರಾಜಕೀಯ ಎಸ್ಪಿಗೆ ತೊಡಕು. ಬಿಎಸ್ಪಿ ಹೆಚ್ಚು ಸದ್ದು ಮಾಡುತ್ತಿಲ್ಲ. ಕಾಂಗ್ರೆಸ್‌ ಮೇಲೆತ್ತಲು ಪ್ರಿಯಾಂಕಾ ವಾದ್ರಾ ಬೆವರು ಹರಿಸುತ್ತಿದ್ದಾರೆ. ಅಸಾದುದ್ದೀನ್‌ ಒವೈಸಿ, ಎಡರಂಗ, ತೃಣಮೂಲ ಕಾಂಗ್ರೆಸ್‌ ಕೂಡ ಸ್ಪರ್ಧಿಸುತ್ತಿವೆ. ಕಳೆದ 3 ಅವಧಿಗಳಿಂದ ಜನರು ಯಾವುದಾದರೂ ಒಂದು ಪಕ್ಷಕ್ಕೆ ಭರ್ಜರಿ ಬಹುಮತ ನೀಡುತ್ತಾ ಬಂದಿದ್ದಾರೆ. ಈ ಬಾರಿಯೂ ಅದು ಮುಂದುವರಿಯುತ್ತಾ ಎಂಬುದೇ ಕುತೂಹಲ.

Video Top Stories