Uttara Pradesh: 37 ವರ್ಷಗಳ ಬಳಿಕ ಸತತ 2 ನೇ ಬಾರಿ ಯುಪಿ ಗೆದ್ದ ಬಿಜೆಪಿ

ಜಿದ್ದಾಜಿದ್ದಿಯಿಂದ ಕೂಡಿದ್ದ ಹಾಗೂ ಲೋಕಸಭೆ ಚುನಾವಣೆಯ ಸೆಮಿಫೈನಲ್‌ನಂತೆ ಬಿಂಬಿತವಾಗಿದ್ದ ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ.

First Published Mar 11, 2022, 10:22 AM IST | Last Updated Mar 11, 2022, 11:20 AM IST

 ಜಿದ್ದಾಜಿದ್ದಿಯಿಂದ ಕೂಡಿದ್ದ ಹಾಗೂ ಲೋಕಸಭೆ ಚುನಾವಣೆಯ ಸೆಮಿಫೈನಲ್‌ನಂತೆ ಬಿಂಬಿತವಾಗಿದ್ದ ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 4 ರಾಜ್ಯಗಳಲ್ಲಿ ಜಯಭೇರಿ ಬಾರಿಸಿದೆ.ಉತ್ತರಪ್ರದೇಶ, ಉತ್ತರಾಖಂಡ, ಮಣಿಪುರ ಹಾಗೂ ಗೋವಾದಲ್ಲಿ ಐದು ವರ್ಷಗಳಿಂದ ಅಧಿಕಾರದಲ್ಲಿದ್ದ ಬಿಜೆಪಿ, ಆಡಳಿತ ವಿರೋಧಿ ಅಲೆಯನ್ನು ಮೆಟ್ಟಿನಿಂತುವಿಜಯ ಪತಾಕೆ ಹಾರಿಸಿದೆ. ಇದರೊಂದಿಗೆ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿಯ ಹವಾ ಇನ್ನೂ ಇದೆ ಎಂಬುದು ಸ್ಪಷ್ಟವಾಗಿ ಸಾಬೀತಾಗಿದೆ.

ಯುಪಿ ಗೆದ್ದ ಬಿಜೆಪಿಗೆ ಈ ಒಂದು ವಿಚಾರದಲ್ಲಿ ಹಿನ್ನಡೆ, ಆಪರೇಷನ್ ಕಮಲವೇ ಮುಳುವಾಯ್ತಾ?

ಉತ್ತರ ಪ್ರದೇಶದಲ್ಲಿ ಬಿಜೆಪಿ ಸತತ 2ನೇ ಬಾರಿ ಅಧಿಕಾರಕ್ಕೆ ಬಂದಿದೆ. ಕಳೆದ 35 ವರ್ಷಗಳಲ್ಲಿ ಮತ್ತೊಂದು ಅವಧಿಗೆ ಪುನರಾಯ್ಕೆಯಾದ ಮೊದಲ ಪಕ್ಷ ಎಂಬ ದಾಖಲೆ ಬರೆದಿದೆ.  ಉತ್ತರಪ್ರದೇಶದ ವಾರಾಣಸಿಯಿಂದ ಸಂಸದರಾಗಿರುವ ಹಾಗೂ 2024ರ ಮಹಾಚುನಾವಣೆ ಮೇಲೆ ಕಣ್ಣಿಟ್ಟಿರುವ ಪ್ರಧಾನಿ ನರೇಂದ್ರ ಮೋದಿ ಪಾಲಿಗೆ ಇದು ಮಹತ್ವದ ಯಶಸ್ಸಾಗಿದೆ. ಅಂತೆಯೇ ಹಾಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರ ವರ್ಚಸ್ಸು ಭಾರೀ ಪ್ರಮಾಣದಲ್ಲಿ ಹೆಚ್ಚಿದೆ. ಇದೇ ಮೊದಲ ಬಾರಿಗೆ ವಿಧಾನಸಭೆಗೆ ಸ್ಪರ್ಧಿಸಿದ್ದ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌, ಗೋರಕ್‌ಪುರ ಕ್ಷೇತ್ರದಲ್ಲಿ 1.03 ಲಕ್ಷಗಳ ಮತಗಳ ಅಂತರದಿಂದ ಗೆದ್ದಿದ್ದಾರೆ. 

 

Video Top Stories