ದೇಶಾದ್ಯಂತ PFI ವಿರುದ್ದ NIA ದಾಳಿ ಕುರಿತು ಮಹತ್ವದ ಹೇಳಿಕೆ ನೀಡಿದ ರಾಹುಲ್ ಗಾಂಧಿ!

ಕೇರಳ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಮೇಲೆ ನಡೆದಿರುವ ದಾಳಿಯನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬೆಂಬಲಿಸಿದ್ದಾರೆ. 

Share this Video
  • FB
  • Linkdin
  • Whatsapp

ಕೇರಳ(ಸೆ.22): ದೇಶದಲ್ಲಿ ಭಯೋತ್ಪಾದಕ ಕೃತ್ಯಕ್ಕೆ ಹಣ ಸಂದಾಯ ಮಾಡಿದ ಪ್ರಮುಖ ಆರೋಪ ಎದುರಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕಚೇರಿ, ಮುಖಂಡರು ಮನೆ ಮೇಲೆ ಎನ್ಐಎ ದಾಳಿ ಮಾಡಿದೆ. ಕೇರಳ ಸೇರಿದಂತೆ 13 ರಾಜ್ಯಗಳಲ್ಲಿ NIA ದಾಳಿ ನಡೆಸಿದೆ. ಈ ಕುರಿತು ರಾಹುಲ್ ಗಾಂಧಿ ಮಹತ್ವದ ಹೇಳಿಕೆ ನೀಡಿದ್ದಾರೆ. ಬಹುತೇಕ ದಾಳಿಗಳನ್ನು ಬಿಜೆಪಿ ಪೋಷಿತ ಎಂದಿದ್ದ ರಾಹುಲ್ ಗಾಂಧಿ ಇದೀಗ ಪಿಎಫ್ಐ ಮೇಲಿನ ದಾಳಿಯನ್ನು ಬೆಂಬಲಿಸಿದ್ದಾರೆ. ಕೋಮುವಾದ, ದ್ವೇಷ, ಹಿಂಸಚಾರದ ರಾಜಕೀಯಕ್ಕೆ ಎಳ್ಳಷ್ಟು ಜಾಗ ನೀಡಬಾರದು. ಇದನ್ನು ಬೇರು ಸಹಿತ ಕಿತ್ತು ಹಾಕಬೇಕು ಎಂದು ದಾಳಿಯನ್ನು ಬೆಂಬಲಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video