Asianet Suvarna News Asianet Suvarna News

ಸೂಪರ್ ಸಂಡೇಯಲ್ಲಿಂದು ಡಬಲ್ ಧಮಾಕ..!

ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಹೋರಾಡಲಿದ್ದು, ಕೋಚ್ ಅನಿಲ್ ಕುಂಬ್ಳೆ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡುತ್ತಾ ಎನ್ನುವ ಕುತೂಹಲ ಜೋರಾಗಿದೆ.

ಬೆಂಗಳೂರು(ಅ.18): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಸೂಪರ್ ಸಂಡೇಯಲ್ಲಿಂದು ಎರಡು ಹೈವೋಲ್ಟೇಜ್ ಪಂದ್ಯಗಳು ನಡೆಯಲಿದ್ದು, ಮೊದಲ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಹಾಗೂ ಕೋಲ್ಕತ ನೈಟ್‌ ರೈಡರ್ಸ್ ತಂಡಗಳು ಮುಖಾಮುಖಿಯಾಗಲಿವೆ.

ಇನ್ನು ಎರಡನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಎದುರು ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಹೋರಾಡಲಿದ್ದು, ಕೋಚ್ ಅನಿಲ್ ಕುಂಬ್ಳೆ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ನೀಡುತ್ತಾ ಎನ್ನುವ ಕುತೂಹಲ ಜೋರಾಗಿದೆ.

IPL 2020: ಅಬ್ಬಾ ವೀಕೆಂಡ್ 2 ಮ್ಯಾಚ್ ಮರೆಯೋಕೆ ಆಗುತ್ತಾ..?

ಸತತ ಎರಡು ಸೋಲು ಕಂಡಿರುವ ಕೆಕೆಆರ್ ಹಾಗೂ ಹೈದರಾಬಾದ್ ತಂಡಗಳು ಗೆಲುವಿನ ಹಳಿಗೆ ಮರಳಲು ಎದುರು ನೋಡುತ್ತಿದ್ದರೆ, ಇತ್ತ ಮುಂಬೈ ಇಂಡಿಯನ್ಸ್ ತಂಡ ಪಂಜಾಬ್ ವಿರುದ್ಧ ಗೆದ್ದು ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲು ಎದುರು ನೋಡುತ್ತಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories