Asianet Suvarna News Asianet Suvarna News

IPL 2020: 5ನೇ ವಾರದಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿತ್ತು?

ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ 11 ಪಂದ್ಯಗಳನ್ನಾಡಿದ್ದು, 7 ಪಂದ್ಯಗಳಲ್ಲಿ ಗೆಲುವು ಹಾಗೂ 4 ಪಂದ್ಯಗಳಲ್ಲಿ ಸೋಲನ್ನು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಬೆಂಗಳೂರು(ಅ.27): 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭವಾಗಿ ಯಶಸ್ವಿಯಾಗಿ 5 ವಾರಗಳು ಕಳೆದಿವೆ. ಕಳೆದ ಮೂರು ವರ್ಷ ನೀರಸ ಪ್ರದರ್ಶನ ತೋರಿದ್ದ ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು, ಈ ಆವೃತ್ತಿಯಲ್ಲಿ ಪ್ಲೇ ಆಫ್ ಹೊಸ್ತಿಲಲ್ಲಿ ಬಂದು ನಿಂತಿದೆ.

ಹೌದು, ಪ್ರಸಕ್ತ ಆವೃತ್ತಿಯ ಐಪಿಎಲ್‌ನಲ್ಲಿ ಆರ್‌ಸಿಬಿ ತಂಡ 11 ಪಂದ್ಯಗಳನ್ನಾಡಿದ್ದು, 7 ಪಂದ್ಯಗಳಲ್ಲಿ ಗೆಲುವು ಹಾಗೂ 4 ಪಂದ್ಯಗಳಲ್ಲಿ ಸೋಲನ್ನು ಕಾಣುವ ಮೂಲಕ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ.

ಮುಂಬೈ ವಿರುದ್ಧದ ಪಂದ್ಯಕ್ಕೂ RCBಗೆ ಶಾಕ್; ಪ್ರಮುಖ ವೇಗಿ ಆಡೋದು ಡೌಟ್..!

ವಿರಾಟ್ ಕೊಹ್ಲಿ ಪಡೆ 5ನೇ ವಾರದಲ್ಲಿ 2 ಪಂದ್ಯಗಳನ್ನಾಡಿದ್ದು ಒಂದು ಪಂದ್ಯದಲ್ಲಿ ಗೆಲುವು ಹಾಗೂ ಮತ್ತೊಂದು ಪಂದ್ಯದಲ್ಲಿ ಸೋಲು ಕಂಡಿದೆ. ಕೆಕೆಆರ್ ವಿರುದ್ಧ 8 ವಿಕೆಟ್‌ಗಳ ಜಯ ಸಾಧಿಸಿದ್ದ ಆರ್‌ಸಿಬಿ ಆ ಬಳಿಕ ಸಿಎಸ್‌ಕೆ ವಿರುದ್ಧ 8 ವಿಕೆಟ್‌ಗಳ ಸೋಲು ಕಂಡಿದೆ. ಈ 2 ಪಂದ್ಯಗಳಲ್ಲಿ ಆರ್‌ಸಿಬಿ ತಂಡದ ಪ್ರದರ್ಶನ ಹೇಗಿತ್ತು? ಆರ್‌ಸಿಬಿ ಮುಂದಿರುವ ಸವಾಲುಗಳೇನು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories