IPL 2020: KKR ಎದುರು ಪಂದ್ಯದ ದಿಕ್ಕನ್ನೇ ಬದಲಿಸಿದ ABD ಆಟ
ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಅಗ್ರಕ್ರಮಾಂಕದ ನಾಲ್ವರು ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಅದರಲ್ಲೂ ಎಬಿಡಿ 33 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ 73 ರನ್ ಬಾರಿಸಿ ಅಜೇಯರಾಗುಳಿದರು. ಅಂತಿಮವಾಗಿ ಆರ್‌ಸಿಬಿ 2 ವಿಕೆಟ್ ಕಳೆದುಕೊಂಡು 194 ರನ್ ಬಾರಿಸಿತ್ತು.
ಬೆಂಗಳೂರು(ಅ.13): ತೀವ್ರ ಜಿದ್ದಾಜಿದ್ದಿನ ಪೈಪೋಟಿ ನಿರೀಕ್ಷಿಸಲಾಗಿದ್ದ ಪಂದ್ಯವನ್ನು ವಿರಾಟ್ ಕೊಹ್ಲಿ ಪಡೆ ಅನಾಯಾಸವಾಗಿ ಗೆದ್ದುಕೊಂಡಿದೆ. ಕೋಲ್ಕತ ನೈಟ್ ರೈಡರ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ಆರ್‌ಸಿಬಿ ಭರ್ಜರಿ ಗೆಲುವನ್ನು ದಾಖಲಿಸಿದೆ.
ಹೌದು, ಶಾರ್ಜಾದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ನಾಯಕ ವಿರಾಟ್ ಕೊಹ್ಲಿ ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ಅಗ್ರಕ್ರಮಾಂಕದ ನಾಲ್ವರು ಬ್ಯಾಟ್ಸ್‌ಮನ್‌ಗಳು ತಂಡಕ್ಕೆ ಉಪಯುಕ್ತ ಕಾಣಿಕೆ ನೀಡಿದರು. ಅದರಲ್ಲೂ ಎಬಿಡಿ 33 ಎಸೆತಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್‌ಗಳ ನೆರವಿನಿಂದ 73 ರನ್ ಬಾರಿಸಿ ಅಜೇಯರಾಗುಳಿದರು. ಅಂತಿಮವಾಗಿ ಆರ್‌ಸಿಬಿ 2 ವಿಕೆಟ್ ಕಳೆದುಕೊಂಡು 194 ರನ್ ಬಾರಿಸಿತ್ತು.
KKR ವಿರುದ್ಧ RCBಗೆ ಭರ್ಜರಿ ಗೆಲುವು, 3ನೇ ಸ್ಥಾನಕ್ಕೆ ಲಗ್ಗೆ ಇಟ್ಟ ಕೊಹ್ಲಿ ಬಾಯ್ಸ್!
ಇನ್ನು ಬೌಲಿಂಗ್‌ನಲ್ಲೂ ಆರ್‌ಸಿಬಿ ಸಂಘಟಿತ ಪ್ರದರ್ಶನ ತೋರಿತು. ಈ ಮೂಲಕ ಬಲಿಷ್ಠ ಕೆಕೆಆರ್ ತಂಡವನ್ನು ಕೇವಲ 112 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯಶಸ್ವಿಯಾಯಿತು. ಈ ಪಂದ್ಯ ಹೇಗಿತ್ತು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.