Asianet Suvarna News Asianet Suvarna News

IPL 2020: ಮುಂಬೈ-ಡೆಲ್ಲಿ ನಡುವಿನ ಪಂದ್ಯ ಮೊದಲೇ ಫಿಕ್ಸ್ ಆಗಿತ್ತಾ..?

ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಅಬುಧಾಬಿಯ ಶೇಖ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿತ್ತು. ಈ ಗೆಲುವು ಹಲವು ಸಂಶಯಗಳನ್ನು ಹುಟ್ಟುಹಾಕಿದೆ.
 

ಬೆಂಗಳೂರು(ಅ.13): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ವೇಳೆ ಮತ್ತೆ ಮ್ಯಾಚ್‌ ಫಿಕ್ಸಿಂಗ್ ಪ್ರತಿಧ್ವನಿಸಿದೆ. ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಮುಕ್ತಾಯವಾಗಿ ಎರಡು ದಿನಗಳು ಕಳೆದ ಬಳಿಕ ಈ ಬಗ್ಗೆ ಒಂದು ಅನುಮಾನ ಶುರುವಾಗಿದೆ.

ಹೌದು, ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ನಡುವೆ ಅಬುಧಾಬಿಯ ಶೇಖ್ ಜಾಯೆದ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ದಾಖಲಿಸಿತ್ತು. ಈ ಗೆಲುವು ಹಲವು ಸಂಶಯಗಳನ್ನು ಹುಟ್ಟುಹಾಕಿದೆ.

IPL 2020: ಧೋನಿ ನೇತೃತ್ವದ CSK ಪಡೆಗಿಂದು ಮಾಡು ಇಲ್ಲವೇ ಮಡಿ ಪಂದ್ಯ..!

ಮುಂಬೈ ಇಂಡಿಯನ್ಸ್ ಫ್ರಾಂಚೈಸಿ ಮಾಡಿದ ಒಂದು ಟ್ವೀಟ್ ಹಲವು ಸಂಶಯಗಳನ್ನು ಹುಟ್ಟುಹಾಕಿದೆ. ಅಷ್ಟಕ್ಕೂ ಹಾಲಿಚಾಂಪಿಯನ್ ಪಂದ್ಯದ ವೇಳೆ ಮಾಡಿದ ಟ್ವೀಟ್ ಏನು? ಈ ಟ್ವೀಟ್‌ಗೂ ಮ್ಯಾಚ್‌ ಫಿಕ್ಸಿಂಗ್ ಸಂಶಯ ಬರಲು ಏನು ಕಾರಣ ಎನ್ನುವ ನಿಮ್ಮೆಲ್ಲ ಕುತೂಹಲಗಳಿಗೆ ಇಲ್ಲಿದೆ ನೋಡಿ ಉತ್ತರ.
 

Video Top Stories