Asianet Suvarna News Asianet Suvarna News

ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಈ ಆಟಗಾರ ಆಡೋದು ಡೌಟು..!

ಸೆಪ್ಟೆಂಬರ್ 19ರಂದು ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕೊರೋನಾ ಸೋಂಕಿಗೆ ತುತ್ತಾಗಿರುವ ಋತುರಾಜ್ ಗಾಯಕ್ವಾಡ್ ಇನ್ನೂ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಆರಂಭಿಕ ಪಂದ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ. ಈ ಕುರಿತಾದ ರಿಪೋರ್ಟ್ ಇಲ್ಲಿದೆ ನೋಡಿ

ಬೆಂಗಳೂರು(ಸೆ.13): 13ನೇ ಆವೃತ್ತಿಯ ಐಪಿಎಲ್ ಟೂರ್ನಿ ಆರಂಭಕ್ಕೆ ಇನ್ನೆರಡನೇ ದಿನಗಳು ಬಾಕಿ ಉಳಿದಿವೆ. ಆದರೆ ಉದ್ಘಾಟನಾ ಪಂದ್ಯದಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್ ತಂಡದ ಯುವ ಬ್ಯಾಟ್ಸ್‌ಮನ್ ಋತುರಾಜ್ ಗಾಯಕ್ವಾಡ್ ಭಾಗವಹಿಸುವುದು ಅನುಮಾನ ಎನಿಸಿದೆ.

ಹೌದು, ಸೆಪ್ಟೆಂಬರ್ 19ರಂದು ನಡೆಯಲಿರುವ ಐಪಿಎಲ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿವೆ. ಕೊರೋನಾ ಸೋಂಕಿಗೆ ತುತ್ತಾಗಿರುವ ಋತುರಾಜ್ ಗಾಯಕ್ವಾಡ್ ಇನ್ನೂ ಚೇತರಿಸಿಕೊಳ್ಳದ ಹಿನ್ನೆಲೆಯಲ್ಲಿ ಆರಂಭಿಕ ಪಂದ್ಯಗಳಿಂದ ವಂಚಿತರಾಗುವ ಸಾಧ್ಯತೆಯಿದೆ.

IPL 2020:ಒಪನಿಂಗ್ ಸೆರಮನಿ ಇಲ್ಲ, ಫ್ಯಾನ್ಸ್‌ಗಿಲ್ಲ ಪ್ರವೇಶ, ಚೀಯರ್ ಲೀಡರ್ಸ್ ಕತೆ ಏನು?

ಇನ್ನು ದುಬೈ ಬಿಸಿಲಿನ ವಾತಾವರಣವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಬ್ಯಾಟ್ಸ್‌ಮನ್ ಎಬಿ ಡಿವಿಲಿಯರ್ಸ್ ಚೆನ್ನೈಗೆ ಹೋಲಿಸಿದ್ದಾರೆ. ಕ್ರಿಕೆಟ್‌ಗೆ ಸಂಬಂಧಿಸಿದ ಮತ್ತಷ್ಟು ಸುದ್ದಿಗಳು ಇಲ್ಲಿವೆ ನೋಡಿ.
 

Video Top Stories