ಐಪಿಎಲ್ 2020: ಇನ್ಮುಂದೆ ಸಿಎಸ್‌ಕೆ ಜರ್ನಿ ಬದಲಾಗುತ್ತಾ..?
ಮೊದಲು ಬ್ಯಾಟಿಂಗ್ ಮಾಡಿದ್ದ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕುವ ಮೂಲಕ ಹೈದರಾಬಾದ್ ತಂಡಕ್ಕೆ ಸವಾಲಿನ ಗುರಿ ನೀಡಿತ್ತು. ಬಳಿಕ ಚಾಣಾಕ್ಷ ಬೌಲಿಂಗ್ ದಾಳಿ ನಡೆಸುವ ಮೂಲಕ ಚೆನ್ನೈ ತಂಡ ಗೆಲುವಿನ ನಗೆ ಬೀರಿದೆ.
ಬೆಂಗಳೂರು(ಅ.14): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 29ನೇ ಪಂದ್ಯದಲ್ಲಿ ಬಲಿಷ್ಠ ಸನ್‌ರೈಸರ್ಸ್ ಹೈದರಾಬಾದ್ ಎದುರು ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್‌ಗಳ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಜಯದ ಹಳಿಗೆ ಮರಳುವಲ್ಲಿ ಧೋನಿ ಪಡೆ ಯಶಸ್ವಿಯಾಗಿದೆ.
ಮೊದಲು ಬ್ಯಾಟಿಂಗ್ ಮಾಡಿದ್ದ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 167 ರನ್ ಕಲೆಹಾಕುವ ಮೂಲಕ ಹೈದರಾಬಾದ್ ತಂಡಕ್ಕೆ ಸವಾಲಿನ ಗುರಿ ನೀಡಿತ್ತು. ಬಳಿಕ ಚಾಣಾಕ್ಷ ಬೌಲಿಂಗ್ ದಾಳಿ ನಡೆಸುವ ಮೂಲಕ ಚೆನ್ನೈ ತಂಡ ಗೆಲುವಿನ ನಗೆ ಬೀರಿದೆ.
ಆಟಗಾರರ ವರ್ಗಾವಣೆಗೆ ಐಪಿಎಲ್ ಫ್ರಾಂಚೈಸಿಗಳಿಂದ ನಿರಾಸಕ್ತಿ..!
2010ರಲ್ಲೂ ಚೆನ್ನೈ ಇದೇ ರೀತಿಯ ಪರಿಸ್ಥಿತಿ ನಿರ್ಮಾಣವಾಗಿತ್ತು. ಇದಾದ ಬಳಿಕ ಅಮೋಘ ಪ್ರದರ್ಶನ ತೋರುವ ಮೂಲಕ ಧೋನಿ ಪಡೆ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಹೀಗಾಗಿ ಸಿಎಸ್‌ಕೆ ಇತಿಹಾಸ ಮರುಕಳಿಸಬಹುದು ಎನ್ನುವ ಲೆಕ್ಕಾಚಾರದಲ್ಲಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.