IPL 2020: ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್‌ಗೆ ಪಂಜಾಬ್ ಟಕ್ಕರ್ ನೀಡಿದ್ದು ಹೇಗೆ?

ಟಾಸ್ ಗೆದ್ದ ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ಅಜೇಯ ಶತಕ ಬಾರಿಸಿ ಮಿಂಚಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸತತ 2 ಪಂದ್ಯಗಳಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಧವನ್ ಭಾಜನರಾದರು.

First Published Oct 21, 2020, 12:25 PM IST | Last Updated Oct 21, 2020, 12:25 PM IST

ಬೆಂಗಳೂರು(ಅ.21): ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿದೆ. ಈ ಗೆಲುವಿನೊಂದಿಗೆ ಪಂಜಾಬ್ ಅಂಕಪಟ್ಟಿಯಲ್ಲಿ 5ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದೆ.

ಹೌದು, ಟಾಸ್ ಗೆದ್ದ ಡೆಲ್ಲಿ ನಾಯಕ ಶ್ರೇಯಸ್ ಅಯ್ಯರ್ ಮೊದಲು ಬ್ಯಾಟಿಂಗ್ ಮಾಡುವ ತೀರ್ಮಾನ ತೆಗೆದುಕೊಂಡರು. ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಳ್ಳುವಂತೆ ಬ್ಯಾಟಿಂಗ್ ಮಾಡಿದ ಶಿಖರ್ ಧವನ್ ಅಜೇಯ ಶತಕ ಬಾರಿಸಿ ಮಿಂಚಿದರು. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ ಸತತ 2 ಪಂದ್ಯಗಳಲ್ಲಿ 2 ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎನ್ನುವ ಗೌರವಕ್ಕೆ ಧವನ್ ಭಾಜನರಾದರು.

ಅಬುಧಾಬಿಯಲ್ಲಿಂದು ಬಲಿಷ್ಠ ಆರ್‌ಸಿಬಿ-ಕೆಕೆಆರ್ ಮುಖಾಮುಖಿ..!

ಇನ್ನು ಡೆಲ್ಲಿ ನೀಡಿದ್ದ ಸ್ಪರ್ಧಾತ್ಮಕ ಗುರಿಯನ್ನು ಆರಂಭಿಕ ಆಘಾತದ ಹೊರತಾಗಿಯೂ ಕ್ರಿಸ್ ಗೇಲ್, ನಿಕೋಲಸ್ ಪೂರನ್ ಹಾಗೂ ಗ್ಲೆನ್ ಮ್ಯಾಕ್ಸ್‌ವೆಲ್ ಆಕರ್ಷಕ ಬ್ಯಾಟಿಂಗ್ ನೆರವಿನಿಂದ ಪಂಜಾಬ್ ಇನ್ನೊಂದು ಓವರ್ ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಈ ಪಂದ್ಯದ ವಿಶ್ಲೇಷಣೆ ಇಲ್ಲಿದೆ ನೋಡಿ.