ಐಪಿಎಲ್ 2020: ಡೆಲ್ಲಿ ಕ್ಯಾಪಿಟಲ್ಸ್‌ಗೆ ಟಕ್ಕರ್ ಕೊಡುತ್ತಾ ಪಂಜಾಬ್..?
ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಗಲೇ 9 ಪಂದ್ಯಗಳ ಪೈಕಿ 7ರಲ್ಲಿ ಗೆಲುವು ಹಾಗೂ 2 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಕಿಂಗ್ಸ್ ಇಲೆವನ್ ಪಂಜಾಬ್ ತಂಡ 6 ಸೋಲು ಹಾಗೂ 3 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಬೆಂಗಳೂರು(ಅ.20): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಕೆ. ಎಲ್. ರಾಹುಲ್ ಪಡೆ ಮತ್ತೊಂದು ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ.
ಹೌದು, ಡೆಲ್ಲಿ ಕ್ಯಾಪಿಟಲ್ಸ್ ತಂಡ ಈಗಾಗಲೇ 9 ಪಂದ್ಯಗಳ ಪೈಕಿ 7ರಲ್ಲಿ ಗೆಲುವು ಹಾಗೂ 2 ಸೋಲುಗಳೊಂದಿಗೆ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದರೆ, ಕಿಂಗ್ಸ್ ಇಲೆವನ್ ಪಂಜಾಬ್ ತಂಡ 6 ಸೋಲು ಹಾಗೂ 3 ಗೆಲುವುಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
ಕೆ ಎಲ್ ರಾಹುಲ್ ಅಬ್ಬರದ ಮುಂದೆ ಸ್ಟಾರ್ ಪ್ಲೇಯರ್ಸ್ ಥಂಡಾ..!
ಶ್ರೇಯಸ್ ಅಯ್ಯರ್ ಪಡೆ ಪ್ಲೇ ಆಫ್ ಖಚಿತ ಪಡಿಸಿಕೊಳ್ಳಲು ಎದುರು ನೋಡುತ್ತಿದ್ದರೆ, ಕೆ ಎಲ್ ರಾಹುಲ್ ಪಡೆ ಹ್ಯಾಟ್ರಿಕ್ ಗೆಲುವಿನ ಕನವರಿಕೆಯಲ್ಲಿದೆ. ಎರಡು ತಂಡಗಳ ಬಲಾಬಲ, ಸಂಭಾವ್ಯ ತಂಡ ಹೇಗಿರಬಹುದು ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.