Asianet Suvarna News Asianet Suvarna News

ಯಾರಾಗ್ತಾರೆ ಈ ಬಾರಿಯ ಐಪಿಎಲ್ ಚಾಂಪಿಯನ್..?

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡ 5ನೇ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಇದೇ ಮೊದಲ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದ್ದು, ಚೊಚ್ಚಲ ಪ್ರಶಸ್ತಿಯ ಕನಸು ಕಾಣುತ್ತಿದೆ.

ಬೆಂಗಳೂರು(ನ.10): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಬಹುನಿರೀಕ್ಷಿತ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡಗಳು ಮುಖಾಮುಖಿಯಾಗುತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯ ವಹಿಸಿದೆ.

ರೋಹಿತ್ ಶರ್ಮಾ ನೇತೃತ್ವದ ಮುಂಬೈ ಇಂಡಿಯನ್ಸ್‌ ತಂಡ 5ನೇ ಐಪಿಎಲ್ ಟ್ರೋಫಿ ಮೇಲೆ ಕಣ್ಣಿಟ್ಟಿದ್ದರೆ, ಶ್ರೇಯಸ್ ಅಯ್ಯರ್ ನೇತೃತ್ವದ ಡೆಲ್ಲಿ ಕ್ಯಾಪಿಟಲ್ಸ್‌ ಇದೇ ಮೊದಲ ಬಾರಿಗೆ ಐಪಿಎಲ್ ಫೈನಲ್ ಪ್ರವೇಶಿಸಿದ್ದು, ಚೊಚ್ಚಲ ಪ್ರಶಸ್ತಿಯ ಕನಸು ಕಾಣುತ್ತಿದೆ.

ಮುಂಬೈ ವಿರುದ್ಧದ ಫೈನಲ್ ಪಂದ್ಯಕ್ಕೆ ಡೆಲ್ಲಿ ತಂಡದಲ್ಲಿ ಒಂದು ಮಹತ್ವದ ಬದಲಾವಣೆ..!

ಪ್ರಸಕ್ತ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಮೂರು ಬಾರಿ ಮುಂಬೈ ಇಂಡಿಯನ್ಸ್ ತಂಡವು ಶ್ರೇಯಸ್ ಅಯ್ಯರ್ ಪಡೆಯನ್ನು ಮಣಿಸಿದೆ. ಇದೀಗ ಡೆಲ್ಲಿ ಹ್ಯಾಟ್ರಿಕ್ ಸೋಲಿಗೆ ಸೇಡು ತೀರಿಸಿಕೊಳ್ಳುತ್ತಾ ಕಾದು ನೋಡಬೇಕಿದೆ. ಸಂಭಾವ್ಯ ತಂಡ ಹೇಗಿರಲಿದೆ? 2 ತಂಡಗಳ ಬಲಾಬಲ ಹೇಗಿರಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.

Video Top Stories