Asianet Suvarna News Asianet Suvarna News

IPL 2020: ಹೈದರಾಬಾದ್ ಮಣಿಸಿ ಪ್ಲೇ ಆಫ್‌ಗೇರುತ್ತಾ ಡೆಲ್ಲಿ ಕ್ಯಾಪಿಟಲ್ಸ್?

ಉಭಯ ತಂಡಗಳು ಕಳೆದ ಪಂದ್ಯದಲ್ಲಿ ಆಘಾತಕಾರಿ ಸೋಲನ್ನು ಕಂಡಿದ್ದು, ಇದೀಗ ಜಯದ ಹಳಿಗೆ ಮರಳಲು ಎದುರು ನೋಡುತ್ತಿದೆ. ಒಂದು ಕಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇ ಆಫ್‌ಗೇರುವ ಲೆಕ್ಕಾಚಾರದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದು ಕಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ.

ಬೆಂಗಳೂರು(ಅ.27): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 47ನೇ ಪಂದ್ಯದಲ್ಲಿಂದು ಬಲಿಷ್ಠ ಡೆಲ್ಲಿ ಕ್ಯಾಪಿಟಲ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಹೈವೋಲ್ಟೇಜ್ ಪಂದ್ಯಕ್ಕೆ ದುಬೈನ ಅಂತಾರಾಷ್ಟ್ರೀಯ ಮೈದಾನ ಆತಿಥ್ಯವನ್ನು ವಹಿಸಿದೆ.

ಉಭಯ ತಂಡಗಳು ಕಳೆದ ಪಂದ್ಯದಲ್ಲಿ ಆಘಾತಕಾರಿ ಸೋಲನ್ನು ಕಂಡಿದ್ದು, ಇದೀಗ ಜಯದ ಹಳಿಗೆ ಮರಳಲು ಎದುರು ನೋಡುತ್ತಿದೆ. ಒಂದು ಕಡೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಪ್ಲೇ ಆಫ್‌ಗೇರುವ ಲೆಕ್ಕಾಚಾರದಲ್ಲಿ ಕಣಕ್ಕಿಳಿಯಲು ಸಜ್ಜಾಗಿದ್ದರೆ, ಇನ್ನೊಂದು ಕಡೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಮಾಡು ಇಲ್ಲವೇ ಮಡಿ ಪಂದ್ಯಕ್ಕೆ ಸಜ್ಜಾಗಿದೆ.

IPL 2020: 5ನೇ ವಾರದಲ್ಲಿ ಆರ್‌ಸಿಬಿ ಪ್ರದರ್ಶನ ಹೇಗಿತ್ತು?

ಡೆಲ್ಲಿ ಹಾಗೂ ಹೈದರಾಬಾದ್ ತಂಡಗಳ ಈ ಹಿಂದಿನ ಮುಖಾಮುಖಿಗಳು ಹೇಗಿದ್ದವು? ಸಂಭಾವ್ಯ ತಂಡ ಹೇಗಿರಲಿದೆ? ಟಾಸ್ ಹೇಗೆ ಮಹತ್ವದ ಪಾತ್ರ ವಹಿಸಲಿದೆ ಎನ್ನುವುದರ ವಿಶ್ಲೇಷಣೆ ಇಲ್ಲಿದೆ ನೋಡಿ.