Asianet Suvarna News Asianet Suvarna News

ಕೆ ಎಲ್ ರಾಹುಲ್ ಅಬ್ಬರದ ಮುಂದೆ ಸ್ಟಾರ್ ಪ್ಲೇಯರ್ಸ್ ಥಂಡಾ..!

Oct 20, 2020, 5:03 PM IST

ದುಬೈ(ಅ.20): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ನಾಯಕ ಕೆ.ಎಲ್ ರಾಹುಲ್ ಅಕರಶಃ ಅಬ್ಬರಿಸುತ್ತಿದ್ದಾರೆ. ಪ್ರಸಕ್ತ ಆವೃತ್ತಿಯಲ್ಲಿ ಈಗಾಗಲೇ 9 ಪಂದ್ಯಗಳನ್ನಾಡಿ 500ಕ್ಕೂ ಅಧಿಕ ರನ್ ಬಾರಿಸಿ ಆರೆಂಜ್ ಕ್ಯಾಪ್ ತಮ್ಮದಾಗಿಸಿಕೊಂಡಿದ್ದಾರೆ.

ಹೌದು, ಕಳೆದ ಮೂರು ವರ್ಷಗಳಿಂದಲೂ ರಾಹುಲ್ 500ಕ್ಕೂ ಅಧಿಕ ರನ್ ಬಾರಿಸುವ ಮೂಲಕ ಎದುರಾಳಿ ತಂಡದ ಪಾಲಿಗೆ ಸಿಂಹಸ್ವಪ್ನವಾಗಿ ಕಾಡಲಾರಂಭಿಸಿದ್ದಾರೆ. ಇದರ ಜತೆಗೆ ಕಳೆದ ಮೂರು ವರ್ಷಗಳಿಂದಲೂ ಐಪಿಎಲ್‌ ಟೂರ್ನಿಯಲ್ಲಿ ಗರಿಷ್ಠ ರನ್ ಬಾರಿಸಿದ ಬ್ಯಾಟ್ಸ್‌ಮನ್ ಎನ್ನುವ ಕೀರ್ತಿಗೆ ರಾಹುಲ್ ಪಾತ್ರರಾಗಿದ್ದಾರೆ. 

ಪಂಜಾಬ್ ಲಕ್ ಬದಲಿಸಿದ ಕ್ರಿಸ್ ಗೇಲ್ ಆಗಮನ..!

ಕನ್ನಡಿಗ ಕೆ.ಎಲ್. ರಾಹುಲ್ ಬ್ಯಾಟಿಂಗ್ ಮುಂದೆ ಎಲ್ಲಾ ಬ್ಯಾಟ್ಸ್‌ಮನ್‌ಗಳು ಥಂಡಾ ಹೊಡೆದಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.