Asianet Suvarna News Asianet Suvarna News

ಅಭಿಮಾನಿಗಳನ್ನು ತುದಿಗಾಲಿನಲ್ಲಿ ನಿಲ್ಲಿಸಿ ಪಂದ್ಯ ಗೆದ್ದ ಪಂಜಾಬ್..!

ಕಿಂಗ್ಸ್ ಇಲೆವನ್ ಪಂಜಾಬ್ ನೀಡಿದ್ದ 127 ರನ್‌ಗಳ ಸುಲಭ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ವಿಫಲವಾಗಿದೆ. ಒಂದು ಹಂತದಲ್ಲಿ 100 ರನ್‌ಗಳಿಗೆ ಕೇವಲ ಮೂರು ವಿಕೆಟ್ ಕಳೆದುಕೊಂಡು ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದ ಹೈದರಾಬಾದ್ ಆ ಬಳಿಕ ನಾಟಕೀಯ ಕುಸಿತ ಕಂಡಿತು.

ಬೆಂಗಳೂರು(ಅ.25): ಕ್ರಿಕೆಟ್ ಅಭಿಮಾನಿಗಳನ್ನು ಕೊನೆ ಕ್ಷಣದವರೆಗೂ ತುದಿಗಾಲಿನಲ್ಲಿ ನಿಲ್ಲುವಂತೆ ಮಾಡಿದ್ದ ಪಂದ್ಯವನ್ನು ಗೆಲ್ಲುವಲ್ಲಿ ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಯಶಸ್ವಿಯಾಗಿದೆ.

ಹೌದು, ಕಿಂಗ್ಸ್ ಇಲೆವನ್ ಪಂಜಾಬ್ ನೀಡಿದ್ದ 127 ರನ್‌ಗಳ ಸುಲಭ ಗುರಿಯನ್ನು ಯಶಸ್ವಿಯಾಗಿ ಬೆನ್ನಟ್ಟುವಲ್ಲಿ ಸನ್‌ರೈಸರ್ಸ್‌ ಹೈದರಾಬಾದ್ ತಂಡ ವಿಫಲವಾಗಿದೆ. ಒಂದು ಹಂತದಲ್ಲಿ 100 ರನ್‌ಗಳಿಗೆ ಕೇವಲ ಮೂರು ವಿಕೆಟ್ ಕಳೆದುಕೊಂಡು ಗೆಲುವಿನತ್ತ ದಾಪುಗಾಲು ಹಾಕುತ್ತಿದ್ದ ಹೈದರಾಬಾದ್ ಆ ಬಳಿಕ ನಾಟಕೀಯ ಕುಸಿತ ಕಂಡಿತು.

ಸೂಪರ್ ಸಂಡೇ ಹೈವೋಲ್ಟೇಜ್ ಪಂದ್ಯಕ್ಕೆ ಕೌಂಟ್ ಡೌನ್ ಶುರು..!

ಬೌಲಿಂಗ್‌ನಲ್ಲಿ ಕ್ರಿಸ್ ಜೋರ್ಡನ್, ಆರ್ಶದೀಪ್ ಸಿಂಗ್ ಹಾಗೂ ಮೊಹಮ್ಮದ್ ಶಮಿ ಮಾರಕ ದಾಳಿ ನಡೆಸಿ ಪಂಜಾಬ್ ತಂಡಕ್ಕೆ ರೋಚಕ ಜಯ ತಂದಿತ್ತರು. ಪಂಜಾಬ್-ಹೈದರಾಬಾದ್ ನಡುವಿನ ಪಂದ್ಯದ ವಿಶ್ಲೇಷಣೆ ಇಲ್ಲಿದೆ ನೋಡಿ 


 

Video Top Stories