IPL 2020: ರಾಯಲ್ಸ್ ಮಣಿಸಿ ಸತತ 6ನೇ ಗೆಲುವು ದಾಖಲಿಸುತ್ತಾ ಪಂಜಾಬ್?
ಒಂದು ಕಡೆ ಸತತ 5 ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಇದೀಗ ಟೂರ್ನಿಯಲ್ಲಿ ಸತತ 6ನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ ತಂಡ ಕಳೆದ ಬಲಿಷ್ಠ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಬೆಂಗಳೂರು(ಅ.30): 13ನೇ ಆವೃತ್ತಿಯ ಐಪಿಎಲ್ ಟೂರ್ನಿಯ 50ನೇ ಪಂದ್ಯದಲ್ಲಿಂದು ಕೆ.ಎಲ್ ರಾಹುಲ್ ನೇತೃತ್ವದ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಮುಖಾಮುಖಿಯಾಗುತ್ತಿದ್ದು, ಈ ಪಂದ್ಯಕ್ಕೆ ಅಬುಧಾಬಿಯ ಶೇಕ್ ಜಾಯೆದ್ ಮೈದಾನ ಆತಿಥ್ಯ ವಹಿಸಿದೆ.
ಒಂದು ಕಡೆ ಸತತ 5 ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಿಂದ ಬೀಗುತ್ತಿರುವ ಕಿಂಗ್ಸ್ ಇಲೆವನ್ ಪಂಜಾಬ್ ತಂಡ ಇದೀಗ ಟೂರ್ನಿಯಲ್ಲಿ ಸತತ 6ನೇ ಗೆಲುವಿನ ಮೇಲೆ ಕಣ್ಣಿಟ್ಟಿದ್ದರೆ, ಮತ್ತೊಂದೆಡೆ ರಾಜಸ್ಥಾನ ರಾಯಲ್ಸ್ ತಂಡ ಕಳೆದ ಬಲಿಷ್ಠ ಮುಂಬೈ ಇಂಡಿಯನ್ಸ್‌ಗೆ ಸೋಲುಣಿಸಿ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದೆ.
ಚೆನ್ನೈ ಗೆಲ್ಲುತ್ತಿದ್ದಂತೆಯೇ ಪ್ಲೇ ಆಫ್‌ಗೆ ಎಂಟ್ರಿಕೊಟ್ಟ ಹಾಲಿ ಚಾಂಪಿಯನ್ಸ್, ಇದೇ ಮ್ಯಾಜಿಕ್..!
ಇವತ್ತಿನ(ಅ.30) ಪಂದ್ಯಕ್ಕೆ ರಾಜಸ್ಥಾನ ರಾಯಲ್ಸ್ ಹಾಗೂ ಕಿಂಗ್ಸ್ ಇಲೆವನ್ ಪಂಜಾಬ್ ತಂಡದಲ್ಲಿ ತಲಾ ಒಂದೊಂದು ಬದಲಾವಣೆ ನಿರೀಕ್ಷೆ ಮಾಡಲಾಗಿದೆ. ಎರಡು ಪಂದ್ಯಗಳ ಬಲಾಬಲ, ಈ ಪಂದ್ಯದ ಸಂಭಾವ್ಯ ತಂಡಗಳ ವಿಶ್ಲೇಷಣೆ ಇಲ್ಲಿದೆ ನೋಡಿ.